ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಜಿಲ್ಲಾ ಹಿತರಕ್ಷಣಾ ಸಮಿತಿ ಶನಿವಾರ ಕರೆ ನೀಡಿದ್ದ ಮಂಡ್ಯ, ಮದ್ದೂರು ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ನಗರ ಹಾಗೂ ಮದ್ದೂರು ಪಟ್ಟಣದಲ್ಲಿ ಅಂಗಡಿ ಮುಂಗಟ್ಟು ಮುಚ್ಚಿದ್ದು ವಾಣಿಜ್ಯ ಚಟುವಟಿಕೆ ಸಂಪೂರ್ಣ ಸ್ತಬ್ಧಗೊಂಡಿದೆ. ಆಟೊ, ಖಾಸಗಿ, ಸಾರಿಗೆ ಸಂಸ್ಥೆ ಬಸ್ ಗಳು ರಸ್ತೆಗೆ ಇಳಿದಿಲ್ಲ. ಶಾಲಾ ಕಾಲೇಜು, ಚಿತ್ರಮಂದಿರಗಳು ಬಂದ್ ಆಗಿವೆ. ನಗರದ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿವೆ. ವಾಹನ ಸಂಚಾರಕ್ಕೆ ಬದಲಿ ಮಾರ್ಗ ಕಲ್ಪಿಸಲಾಗಿದೆ.
.ಕಾವೇರಿ ವಿವಾದ: ಸುಪ್ರೀಂ ತೀರ್ಪು ತಿರಸ್ಕಾರಕ್ಕೆ ಆಗ್ರಹ.
ವಿವಿಧ ಸಂಘಟನೆಗಳ ಸದಸ್ಯರು ಬೈಕ್ ರ್ಯಾಲಿ ನಡೆಸಿ ಕಾವೇರಿ ಜಾಗೃತಿ ಕರಪತ್ರ ಹಂಚಿದರು.

ರಸ್ತೆಯಲ್ಲಿ ಮಲಗಿ ಆಕ್ರೋಶ; ಜೆ.ಸಿ ವೃತ್ತದಲ್ಲಿ ರೈತ ಮುಖಂಡರು ಮಲಗಿ ಕೇಂದ್ರ ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ತಕ್ಷಣವೇ ತಮಿಳುನಾಡಿನ ಹರಿಯುತ್ತಿರುವ ನೀರು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
.'ಕಾವೇರಿ: ಮಧ್ಯಸ್ಥಿಕೆ ವಹಿಸಲು ಕೇಂದ್ರಕ್ಕೆ ಸಾಧ್ಯವಾಗದು‘.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.