ನವದೆಹಲಿ: ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಹರಿಸಬೇಕು ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹೊರಡಿಸಿರುವ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಕೋರಿ ಸುಪ್ರೀಂ ಕೋರ್ಟ್‌ಗೆ ರಾಜ್ಯ ಸರ್ಕಾರ ಬುಧವಾರ ಪ್ರಮಾಣಪತ್ರ ಸಲ್ಲಿಸಿದೆ.

‘ತಮಿಳುನಾಡಿಗೆ ನೀರು ಹರಿಸಬೇಕು ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆಗಸ್ಟ್ 11, ಆಗಸ್ಟ್ 29 ಹಾಗೂ ಸೆಪ್ಟೆಂಬರ್ 18ರಂದು ಹೊರಡಿಸಿರುವ ಆದೇಶ ನ್ಯಾಯಸಮ್ಮತವಲ್ಲ. ಸೆಪ್ಟೆಂಬರ್ 18ರಂದು ಹೊರಡಿಸಿರುವ ಆದೇಶವನ್ನು ಪುನರ್‌ಪರಿಶೀಲಿಸಬೇಕು ಎಂಬುದಾಗಿ ಪ್ರಾಧಿಕಾರಕ್ಕೆ ನಿರ್ದೇಶನ ನೀಡಬೇಕು’ ಎಂದೂ ರಾಜ್ಯ ಹೇಳಿದೆ.

ಜತೆಗೆ, ವಕೀಲ ವಿವೇಕ್ ಸುಬ್ಬಾ ರೆಡ್ಡಿ, ಸ್ಯಾಂಕಿ ಉದ್ಯಾನ ನಡಿಗೆದಾರರ ಸಂಘ, ಎಂಬಸಿ ಹೆರಿಟೇಜ್ ಅಪಾರ್ಟ್‌ಮೆಂಟ್ ಓನರ್ಸ್ ಅಸೋಸಿಯೇಷನ್, ಮಲ್ಲೇಶ್ವರ ಕಮರ್ಷಿಯಲ್ ಫೋರಂ ಸೇರಿದಂತೆ ಒಂಬತ್ತು ಸಂಘ ಸಂಸ್ಥೆಗಳು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿವೆ.

‘ರಾಜ್ಯದ 16 ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಇಂತಹ ಸನ್ನಿವೇಶದಲ್ಲಿ ತಮಿಳುನಾಡಿಗೆ 24 ಸಾವಿರ ಕ್ಯೂಸೆಕ್ ನೀರು ಹರಿಸಲು ಸಾಧ್ಯವಿಲ್ಲ. ತಮಿಳುನಾಡಿನ ಅರ್ಜಿ ತಿರಸ್ಕರಿಸಬೇಕು’ ಎಂದು ಪ್ರಮಾಣಪತ್ರದಲ್ಲಿ ಕೋರಲಾಗಿದೆ.
.ತ. ನಾಡಿಗೆ ಪ್ರತಿದಿನ 5 ಸಾವಿರ ಕ್ಯುಸೆಕ್ ನೀರು ಹರಿಸಲು ಕಾವೇರಿ ಪ್ರಾಧಿಕಾರ ಆದೇಶ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.