ಬೆಂಗಳೂರು: ‘ರಾಯಚೂರು ವಿಮಾನ ನಿಲ್ದಾಣಕ್ಕೆ ಕೇಂದ್ರ ಸರ್ಕಾರದಿಂದ ಕೊನೆಗೂ ಹಸಿರು ನಿಶಾನೆ ಸಿಕ್ಕಿದೆ’ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ತಿಳಿಸಿದ್ದಾರೆ.

‘ಕೇಂದ್ರ ವಿಮಾನಯಾನ ಸಚಿವರಾದ ರಾಮ್ ಮೋಹನ್ ಅವರನ್ನು ರಾಯಚೂರು ಸಂಸದ ಜಿ. ಕುಮಾರ ನಾಯ್ಕ್ ನೇತೃತ್ವದ ನಿಯೋಗ ಇತ್ತೀಚಿಗೆ ಭೇಟಿ ಮಾಡಿ ಮನವಿ ಸಲ್ಲಿಸಿತ್ತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಅವರು ಅನುಮತಿ ನೀಡಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ’ ಎಂದು ಬೋಸರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ರಾಜ್ಯ ಸರ್ಕಾರ ರಾಯಚೂರಿನಲ್ಲಿ ನೂತನ ವಿಮಾನ ನಿಲ್ದಾಣ ಮಾಡಲು ಬಹಳ ಪ್ರಯತ್ನ ಮಾಡಿತ್ತು. ಬಜೆಟ್ನಲ್ಲೂ ಈ ವಿಷಯ ಪ್ರಸ್ತಾಪಿಸಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶೇಷ ಕಾಳಜಿ ವಹಿಸಿ ಕೇಂದ್ರ ಸರ್ಕಾರದ ಜೊತೆ ಸಮನ್ವಯ ಮಾಡಿದ್ದರು. ಅಗತ್ಯವಿರುವ ಎಲ್ಲ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದರು. ಅದರ ಬೆನ್ನಲ್ಲೇ, ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ದಿ ನಿಗಮ ಅಗತ್ಯ ಪ್ರಸ್ತಾವವನ್ನು ಸಲ್ಲಿಸಿತ್ತು’ ಎಂದೂ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.