ಬೆಂಗಳೂರು: ನೋಟರಿ ವಕೀಲರನ್ನು ನೇಮಕ ಮಾಡಲು ₹ 50 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು, ಮುಂಗಡವಾಗಿ ₹ 25,000 ಪಡೆಯುತ್ತಿದ್ದ ಆರೋಪದಡಿ ಕಾನೂನು ಮತ್ತು ನ್ಯಾಯ ಸಚಿವಾಲಯದ ಕಾನೂನು ವ್ಯವಹಾರದ ವಿಭಾಗದ ಹೆಚ್ಚುವರಿ ಕಾನೂನು ಸಲಹೆಗಾರ ಟಿ.ಕೆ. ಮಲಿಕ್ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

‘ಕೇಂದ್ರ ಸರ್ಕಾರದ ನೋಟರಿ ನೇಮಕ ಮಾಡುವ ಜವಾಬ್ದಾರಿಯನ್ನು ಕಾನೂನು ವ್ಯವಹಾರ ವಿಭಾಗಕ್ಕೆ ನೀಡಲಾಗಿದೆ. ಬೆಂಗಳೂರನ ಕಚೇರಿಯಲ್ಲಿ ಕೆಲಸ ಮಾಡುವ ಮಲಿಕ್, ಅಧಿಕಾರ ದುರುಪಯೋಗಪಡಿಸಿಕೊಂಡು ಲಂಚ ಪಡೆದು ನೋಟರಿ ನೀಡುತ್ತಿದ್ದ. ಇದಕ್ಕೆ ಸಹಕರಿಸುತ್ತಿದ್ದ ಬೆಂಗಳೂರಿನ ವಕೀಲರಾದ ಜಿ.ಕೆ. ವಾಣಿ ಎಂಬುವವರನ್ನೂ ಸೆರೆ ಹಿಡಿಯಲಾಗಿದೆ. ಇಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ’ ಎಂದು ಸಿಬಿಐ ಮೂಲಗಳು ಹೇಳಿವೆ.

‘₹ 25,000 ಪಡೆಯುತ್ತಿದ್ದ ಸಂದರ್ಭದಲ್ಲಿ ದಾಳಿ ಮಾಡಿ ಮಲಿಕ್‌ನನ್ನು ಬಂಧಿಸಲಾಗಿದೆ. ಇದೇ ವೇಳೆ ಈತನ ಬಳಿ ₹ 4.32 ಲಕ್ಷ ನಗದು ಸಿಕ್ಕಿದ್ದು, ಅದು ಸಹ ಲಂಚದ ಹಣವಿರುವ ಮಾಹಿತಿ ಇದೆ. ಜೊತೆಗೆ, ಬೆಂಗಳೂರು ಹಾಗೂ ಗಾಜಿಯಾದಾಬ್‌ನಲ್ಲಿರುವ ಆರೋಪಿಗೆ ಸೇರಿದ್ದ ಎರಡು ಸ್ಥಳಗಳ ಮೇಲೂ ದಾಳಿ ಮಾಡಿ, ₹ 34 ಲಕ್ಷ ಜಪ್ತಿ ಮಾಡಲಾಗಿದೆ. ಆರೋಪಿ ನೀಡಿದ್ದ ಮಾಹಿತಿಯಂತೆ ಬೆಂಗಳೂರಿನಲ್ಲಿ ವಾಣಿ ಅವರನ್ನು ಬಂಧಿಸಲಾಗಿದೆ.’ ಎಂದು ಮೂಲಗಳು ತಿಳಿಸಿವೆ.

‘ಮಹತ್ವದ ಪ್ರಕರಣಗಳಲ್ಲಿ ಎದುರಾಳಿ ವಕೀಲರ ಜೊತೆಗೂ ಮಲಿಕ್ ಒಡನಾಟವಿಟ್ಟುಕೊಂಡು, ಪ್ರಕರಣ ಗೆಲ್ಲಲು ಸಹಕಾರ ನೀಡುತ್ತಿದ್ದ ಬಗ್ಗೆ ಮಾಹಿತಿ ಇದೆ. ದೇಶದ ಹಲವು ರಾಜ್ಯಗಳ ವಕೀಲರಿಗೆ ಅಕ್ರಮವಾಗಿ ನೋಟರಿ ನೀಡಿರುವ ಸಂಶಯವೂ ಇದೆ. ಈ ಬಗ್ಗೆ ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.