ಬೆಂಗಳೂರು: ಪ್ರಮುಖ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ‘ಸೀಟ್ ಬ್ಲಾಕಿಂಗ್’ ದಂಧೆ ನಡೆದಿರುವ ಶಂಕೆ ವ್ಯಕ್ತವಾದ ಬೆನ್ನಲ್ಲೇ, ಸಮಗ್ರ ತನಿಖೆಗಾಗಿ ಸಮಿತಿ ರಚಿಸಲು ಉನ್ನತ ಶಿಕ್ಷಣ ಇಲಾಖೆ ಮುಂದಾಗಿದೆ.

ನಿವೃತ್ತ ಕುಲಪತಿಯೊಬ್ಬರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗುತ್ತಿದ್ದು, ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಸೇರಿದಂತೆ ವಿವಿಧ ತಜ್ಞರು ಸಮಿತಿಯ ಸದಸ್ಯರಾಗಿರುತ್ತಾರೆ.

ರಾಜ್ಯದ ಎಂಜಿನಿಯರಿಂಗ್ ಕಾಲೇಜುಗಳಲ್ಲಿನ ವಿವಿಧ ಕೋರ್ಸ್ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರತಿ ವರ್ಷವೂ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸುತ್ತದೆ. ಪರೀಕ್ಷೆಯಲ್ಲಿ ಗಳಿಸಿದ ಶೇ 50 ಅಂಕಗಳು ಹಾಗೂ ಸಿಇಟಿಯ ಶೇ 50 ಅಂಕಗಳನ್ನು ಪರಿಗಣಿಸಿ ಅಂತಿಮವಾಗಿ ರ್ಯಾಂಕಿಂಗ್ ಪಟ್ಟಿ ಪ್ರಕಟಿಸಲಾಗುತ್ತದೆ. ಪಟ್ಟಿ ಪ್ರಕಾರ, ವಿದ್ಯಾರ್ಥಿಗಳು ತಮಗೆ ಬೇಕಾದ ಕಾಲೇಜು, ಕೋರ್ಸ್ಗಳನ್ನು ಆದ್ಯತೆಯ ಮೇಲೆ ಪಡೆಯುತ್ತಾರೆ.

2024ನೇ ಸಾಲಿನ ಸಿಇಟಿಯಲ್ಲಿ ಉನ್ನತ ರ್ಯಾಂಕ್ ಪಡೆದ ಹಲವರು ಪ್ರಮುಖ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಕಂಪ್ಯೂಟರ್ ಸೈನ್ಸ್, ಕೃತಕ ಬುದ್ದಿಮತ್ತೆ, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಮತ್ತಿತರ ಸಾಕಷ್ಟು ಬೇಡಿಕೆ ಇರುವ ಕೋರ್ಸ್ಗಳನ್ನು ಆಯ್ದುಕೊಂಡು, ಅಂತಿಮ ಸುತ್ತಿನವರೆಗೂ ಸೀಟು ಹಿಡಿದಿಟ್ಟುಕೊಂಡರೂ ಪ್ರವೇಶ ಪಡೆದಿಲ್ಲ. ಇದರಿಂದ ಭಾರಿ ಬೇಡಿಕೆ ಇರುವ ಕೋರ್ಸ್ಗಳ ಸೀಟುಗಳು ಖಾಲಿ ಉಳಿದಿವೆ.

ರಾಜ್ಯ ಸರ್ಕಾರ ಮತ್ತು ಖಾಸಗಿ ಕಾಲೇಜುಗಳ ಆಡಳಿತ ಮಂಡಳಿ ನಡುವೆ ನಡೆದ ಒಪ್ಪಂದದಂತೆ ಈ ಸೀಟುಗಳನ್ನು ಆಯಾ ಕಾಲೇಜುಗಳಿಗೇ ಬಿಟ್ಟುಕೊಡಬೇಕಿದೆ. ಹೀಗೆ ಉಳಿದ ಸೀಟುಗಳನ್ನು ಖಾಸಗಿ ಕಾಲೇಜುಗಳು ದೊಡ್ಡ ಮೊತ್ತದ ಹಣಕ್ಕೆ ಇತರೆ ವಿದ್ಯಾರ್ಥಿಗಳಿಗೆ ನೀಡುತ್ತವೆ. ಇದರಿಂದ ಸಿಇಟಿ ಬರೆದ ಇತರೆ ಪ್ರತಿಭಾವಂತ ವಿದ್ಯಾರ್ಥಿಗಳು ಅವಕಾಶ ವಂಚಿತರಾಗುತ್ತಿದ್ದಾರೆ.

ಕಂಪ್ಯೂಟರ್ ಸೈನ್ಸ್, ಕೃತಕ ಬುದ್ದಿಮತ್ತೆಯಂತಹ ಪ್ರಮುಖ ಕೋರ್ಸ್ಗಳ ಸೀಟುಗಳು ಪ್ರಮುಖ ಕಾಲೇಜುಗಳಲ್ಲೇ ದೊಡ್ಡ ಪ್ರಮಾಣದಲ್ಲಿ ಉಳಿದಿರುವುದು ಸೀಟು ಬ್ಲಾಕಿಂಗ್ ವ್ಯವಹಾರ ನಡೆದಿರುವ ಶಂಕೆಗೆ ಪುಷ್ಟಿ ನೀಡಿತ್ತು. ಹಾಗಾಗಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈ ಬಾರಿ ಸೀಟು ಹಂಚಿಕೆಯಾಗಿದ್ದರೂ ಕಾಲೇಜುಗಳಿಗೆ ಪ್ರವೇಶ ಪಡೆಯದ 2,348 ವಿದ್ಯಾರ್ಥಿಗಳಿಗೆ ಎರಡು ದಿನಗಳ ಹಿಂದಷ್ಟೇ ನೋಟಿಸ್ ಜಾರಿ ಮಾಡಿತ್ತು.

ಒಪ್ಪಂದ ಬದಲಾವಣೆಗೆ ಚಿಂತನೆ

ರಾಜ್ಯ ಸರ್ಕಾರ ಮತ್ತು ಖಾಸಗಿ ಕಾಲೇಜು ಆಡಳಿತ ಮಂಡಳಿಗಳ ಸಂಘದ ನಡುವೆ ಎಂಜಿನಿಯರಿಂಗ್ ಸೀಟುಗಳ ಹಂಚಿಕೆಗೆ ಒಪ್ಪಂದವಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ಮೂಲಕ ಹಂಚಿಕೆ ಮಾಡುವ ಸೀಟುಗಳು ಎರಡನೇ ಸುತ್ತಿನ ನಂತರವೂ ಉಳಿದರೆ ಒಪ್ಪಂದದಂತೆ ಅವುಗಳನ್ನು ಖಾಸಗಿ ಕಾಲೇಜುಗಳಿಗೆ ಬಿಟ್ಟುಕೊಡಬೇಕು.

ಈ ನಿಯಮಗಳನ್ನು ಬಳಸಿಕೊಳ್ಳುವ ಕೆಲ ಪ್ರಮುಖ ಕಾಲೇಜುಗಳು ಸಿಇಟಿ ಮೂಲಕ ಕಡಿಮೆ ಶುಲ್ಕಕ್ಕೆ ಬರುವ ವಿದ್ಯಾರ್ಥಿಗಳು ಪ್ರವೇಶ ಪಡೆಯದಂತೆ ತಡೆಯಲು ಸೀಟು ಬ್ಲಾಕಿಂಗ್ ದಂಧೆಗೆ ಇಳಿದಿವೆ ಎನ್ನಲಾಗಿದೆ.

ವೈದ್ಯಕೀಯ ಕೋರ್ಸ್ಗಳಿಗೆ ಪ್ರವೇಶ ಸಿಗದೆ ಮುಂದಿನ ಶೈಕ್ಷಣಿಕ ವರ್ಷಕ್ಕೆ ತರಬೇತಿ ಪಡೆಯುತ್ತಿರುವ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಬಳಸಿಕೊಂಡು ಸೀಟ್ ಬ್ಲಾಕಿಂಗ್ ವ್ಯವಹಾರ ನಡೆಸುತ್ತಿರಬಹುದು ಎಂದು ಕೆಇಎ ಅಧಿಕಾರಿಗಳು ಶಂಕಿಸಿದ್ದರು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಉನ್ನತ ಶಿಕ್ಷಣ ಇಲಾಖೆ ಸಮಿತಿ ವರದಿ ನೀಡಿದ ನಂತರ ಒಪ್ಪಂದ ನಿಯಮಗಳನ್ನು ಮರುಮಾರ್ಪಾಡು ಮಾಡಲು ಚಿಂತನೆ ನಡೆಸಿದೆ.

ಸೀಟು ಹಂಚಿಕೆಯಾದರೂ ಪ್ರವೇಶ ಪಡೆಯದ ವಿದ್ಯಾರ್ಥಿಗಳು ನೋಟಿಸ್ಗೆ ಉತ್ತರ ನೀಡಿದ ನಂತರ, ಮುಖ್ಯಮಂತ್ರಿ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು
ಡಾ.ಎಂ.ಸಿ. ಸುಧಾಕರ್, ಉನ್ನತ ಶಿಕ್ಷಣ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.