ಬೆಂಗಳೂರು: ‘ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಎನ್ಡಿಎ ಅಭ್ಯರ್ಥಿಯಾಗಿದ್ದು, ಅವರನ್ನು ಗೆಲ್ಲಿಸುವ ಕರ್ತವ್ಯ ನಮ್ಮದು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಇವರು (ಯೋಗೇಶ್ವರ್) ಯಾವ ರೀತಿ ಹುಚ್ಚುಚ್ಚಾಗಿ ಆಡಿ ಪಕ್ಷ ಬಿಟ್ಟು ಹೋಗಿದ್ದಾರೆ. ಇವೆಲ್ಲವನ್ನೂ ಆ ಕ್ಷೇತ್ರದ ಜನರೂ ಗಮನಿಸುತ್ತಾರೆ. ಈ ವಯಸ್ಸಿನಲ್ಲೂ ಮಾಜಿ ಪ್ರಧಾನಿ ದೇವೇಗೌಡರು ಬಂದು ಪ್ರಚಾರ ಮಾಡುತ್ತಾರೆ ಎನ್ನುವುದನ್ನು ಕೇಳಿ ಕಾಂಗ್ರೆಸ್ ಪಕ್ಷದವರಿಗೂ ಆತಂಕ ಶುರುವಾಗಿದೆ. ದೇವೇಗೌಡರು ಬಂದರೆ ಕ್ಷೇತ್ರ ಗೆಲ್ಲುವುದು ಕಷ್ಟ ಎನ್ನುವ ಸತ್ಯ ಕಾಂಗ್ರೆಸ್ನವರಿಗೂ ಗೊತ್ತಾಗಿದೆ. ಆದ್ದರಿಂದ ಅವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದರು.

ಒಳಮೀಸಲಾತಿ ಬಗ್ಗೆ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ಗೆ ಪ್ರಾಮಾಣಿಕತೆ ಇಲ್ಲ. ಈ ವಿಷಯದಲ್ಲಿ ರಾಜಕೀಯ ಲಾಭ ಪಡೆಯಲು ಮತ್ತು ಗೊಂದಲ ಮೂಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ವಿಜಯೇಂದ್ರ ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.