ಬೆಂಗಳೂರು: ಚನ್ನಪಟ್ಟಣ ಕ್ಷೇತ್ರದಿಂದ ಎನ್ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರ್ ಸ್ವಾಮಿ ಸ್ಪರ್ಧಿಸಲಿದ್ದು, ಬಿಜೆಪಿ–ಜೆಡಿಎಸ್ ಒಟ್ಟಿಗೆ ಸೇರಿ ಅವರನ್ನು ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸುತ್ತೇವೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದರು.
.ಚನ್ನಪಟ್ಟಣ ಉಪಚುನಾವಣೆ | ನಿಖಿಲ್ ಕುಮಾರಸ್ವಾಮಿ ಮೈತ್ರಿ ಅಭ್ಯರ್ಥಿ: ದೇವೇಗೌಡ.
ತಮ್ಮ ನಿವಾಸದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ನ ಇತರ ನಾಯಕರ ಜತೆ ಸಭೆಯ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಜೆಡಿಎಸ್ ಪಕ್ಷ ಅಭ್ಯರ್ಥಿ ಆಯ್ಕೆ ಮಾಡುವುದನ್ನು ಕಾದಿದ್ದೆವು. ಇವತ್ತು ಬೆಳಿಗ್ಗೆ ಆಯ್ಕೆ ಮಾಡಿದ್ದಾರೆ. ಬಿಜೆಪಿ–ಜೆಡಿಎಸ್ ನಾಯಕರು ಒಟ್ಟಾಗಿ ಪ್ರವಾಸ ಮಾಡಿ ನೂರಕ್ಕೆ ನೂರರಷ್ಟು ಗೆಲ್ಲಿಸುತ್ತೇವೆ. ಇದರಲ್ಲಿ ಯಾವುದೇ ಸಂಶಯ ಬೇಕಿಲ್ಲ. ಪಕ್ಷಾಂತರ ಮಾಡಿದವರ ಬಗ್ಗೆ ಯಾವುದೇ ಮಾತು ಆಡುವುದಿಲ್ಲ. ನಿಖಿಲ್ ಕುಮಾರಸ್ವಾಮಿ ಅವರನ್ನು ಗೆಲ್ಲಿಸುವುದಷ್ಟೇ ನಮ್ಮ ಗುರಿ ಎಂದು ಯಡಿಯೂರಪ್ಪ ತಿಳಿಸಿದರು.
.ಚನ್ನಪಟ್ಟಣ ಉಪ ಚುನಾವಣೆ: ಯೋಗೇಶ್ವರ್ ನಾಮಪತ್ರ ಸಲ್ಲಿಕೆಗೆ ಸಿ.ಎಂ, ಡಿಸಿಎಂ ಸಾಥ್.
ಸಭೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಮತ್ತು ಶಾಸಕರು ಭಾಗವಹಿಸಿದ್ದರು.
.Channapatna Bypoll |ಚನ್ನಪಟ್ಟಣ ‘ಸೈನಿಕ’ನಿಗೆ ಇದು ಆರನೇ ಪಕ್ಷಾಂತರ!.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.