ರಾಮನಗರ: ತೀವ್ರ ಕುತೂಹಲ ಕೆರಳಿಸಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಇನ್ನು ಕೆಲವೇ ಹೊತ್ತಿನಲ್ಲಿ ಕುತೂಹಲಕ್ಕೆ ತೆರೆ ಬೀಳಲಿದೆ. ಚನ್ನಪಟ್ಟಣಕ್ಕೆ ಮುಂದಿನ ಮೂರೂವರೆ ವರ್ಷ ಯಾರು ‘ಶಾಸಕ’ರಾಗಲಿದ್ದಾರೆ ಎಂಬ ಕುತೂಹಲಕ್ಕೆ ಮಧ್ಯಾಹ್ನದ ಹೊತ್ತಿಗೆ ಮತದಾರರ ತೀರ್ಪು ಹೊರಬೀಳಲಿದೆ.

ಚನ್ನಪಟ್ಟಣ ಉಪ ಚುನಾವಣೆ ಮತ ಎಣಿಕೆಯ ಅಪ್ಡೇಟ್...

11ನೇ ಸುತ್ತು

* ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್: 67,967

* ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ: 46,001

* ಯೋಗೇಶ್ವರ್ ಮುನ್ನಡೆ: 21,966

ಪ್ರತಿಷ್ಠೆಯ ಕಣ

ಬಿಜೆಪಿ ತ್ಯಜಿಸಿ ಬಂದ ಸಿ.ಪಿ. ಯೋಗೇಶ್ವರ್ಗೆ ಚನ್ನಪಟ್ಟಣದಲ್ಲಿ ಮಣೆ ಹಾಕಿರುವ ರಾಜ್ಯ ಕಾಂಗ್ರೆಸ್ ನಾಯಕರು, ಈ ಕ್ಷೇತ್ರವನ್ನು ಜೆಡಿಎಸ್ನಿಂದ ಕಸಿದುಕೊಳ್ಳಲೇಬೇಕೆಂಬ ಪಣ ತೊಟ್ಟಿದ್ದಾರೆ. ರಾಜಕೀಯ ಜಿದ್ದಾಜಿದ್ದಿಗೆ ಹೆಸರುವಾಸಿ ಯಾಗಿರುವ ಈ ಕ್ಷೇತ್ರ ಎಚ್.ಡಿ. ಕುಮಾರಸ್ವಾಮಿ ಮತ್ತು ಡಿ.ಕೆ. ಶಿವಕುಮಾರ್ ನಡುವಿನ ಪ್ರತಿಷ್ಠೆಯ ಕಣವಾಗಿಯೂ ಬದ ಲಾಗಿದೆ.

ಅಖಾಡದಲ್ಲಿ ಯಾರು?

ಪ್ರಮುಖ ಅಭ್ಯರ್ಥಿಗಳಾದ ಜೆಡಿಎಸ್ನ ನಿಖಿಲ್ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ನ ಸಿ.ಪಿ. ಯೋಗೇಶ್ವರ್ ನಡುವೆ ನೇರ ಹಣಾಹಣಿಯೊಂದಿಗೆ, ತೀವ್ರ ಪೈಪೋಟಿ ನಡೆದಿದೆ. ಇವರೊಂದಿಗೆ ಇತರ 8 ಪಕ್ಷಗಳ ಅಭ್ಯರ್ಥಿಗಳು ಹಾಗೂ 21 ಪಕ್ಷೇತರರು ಸಹ ಅಖಾಡದಲ್ಲಿದ್ದಾರೆ.

ದಾಖಲೆಯ ಮತದಾನ:

ಸಾರ್ವತ್ರಿಕ ಹಾಗೂ ಉಪ ಚುನಾವಣೆ ಸೇರಿದಂತೆ ಕ್ಷೇತ್ರವು ಇದುವರೆಗೆ 19 ಚುನಾವಣೆಗಳಿಗೆ ಸಾಕ್ಷಿಯಾಗಿದೆ. ಆ ಪೈಕಿ, ಈ ಸಲದ ಮತ ಪ್ರಮಾಣ ಶೇ 88.81 ತಲುಪುವುದರೊಂದಿಗೆ ದಾಖಲೆ ಬರೆದಿದೆ. ಉಪ ಸಮರದ ಮತಹಬ್ಬದಲ್ಲಿ ಮತದಾರರು ತೋರಿರುವ ಉತ್ಸಾಹವು ಯಾರಿಗೆ ಪಾಸಿಟಿವ್, ಯಾರಿಗೆ ನೆಗೆಟಿವ್ ಆಗಲಿದೆ ಎಂಬುದರ ಚರ್ಚೆಯೂ ಗರಿಗೆದರಿದೆ.

ಭರ್ಜರಿ ಪ್ರಚಾರ...

ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರು–ಶಾಸಕರು ಭರ್ಜರಿ ಪ್ರಚಾರ ನಡೆಸಿದ್ದಾರೆ. ಮೈತ್ರಿಕೂಟದ ಅಭ್ಯರ್ಥಿಗಳ ಪರ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ ಬೆವರು ಸುರಿಸಿದ್ದಾರೆ.
.ಚನ್ನಪಟ್ಟಣ | ಉಪ ಸಮರದ ಫಲಿತಾಂಶ ಕುತೂಹಲಕ್ಕೆ ನಾಳೆ ತೆರೆ.Karnataka Bypoll Results: ಚನ್ನಪಟ್ಟಣದಲ್ಲಿ ನಿಖಿಲ್ಗೆ ಭಾರಿ ಹಿನ್ನಡೆ, ಮೂರೂ ಕಡೆ 'ಕೈ' ಮೇಲುಗೈ.Election Results | ಜಾರ್ಖಂಡ್ನಲ್ಲಿ ಇಂಡಿಯಾ ಬಣ ಮುನ್ನಡೆ; ಮಹಾರಾಷ್ಟ್ರದಲ್ಲಿ ಮಹಾಯುತಿ ದ್ವಿಶತಕ.Shiggaon Election Results Highlights: ಕಾಂಗ್ರೆಸ್ಗೆ ಭಾರಿ ಮುನ್ನಡೆ.Maharashtra Election Results Highlights: ಮಹಾಯುತಿ ಕೂಟಕ್ಕೆ ಭಾರಿ ಮುನ್ನಡೆ.Jharkhand Election Results Highlights: NDAಗೆ ಹಿನ್ನಡೆ, ಇಂಡಿಯಾಗೆ ಮುನ್ನಡೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.