ಬೆಂಗಳೂರು: ಚನ್ನಪಟ್ಟಣ ಉಪ ಚುನಾವಣೆಗೆ ಕಾಂಗ್ರೆಸ್ ಉತ್ತಮ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲಿದೆ. ಈ ಕುರಿತು ಚುನಾವಣಾ ಅಧಿಸೂಚನೆಯ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದರು.

ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ‘ಚನ್ನಪಟ್ಟಣಕ್ಕೆ ಸುರೇಶ್ ಅವರೇ ಅಭ್ಯರ್ಥಿಯಾಗಬೇಕು ಎಂದು ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಅವರ ಅಭಿಮಾನ, ಪ್ರೀತಿ ನಮಸ್ಕಾರ ಹೇಳುವೆ. ಲೋಕಸಭಾ ಚುನಾವಣೆಯಲ್ಲಿ ನನಗೆ ಅನ್ಯಾಯವಾಗಿಲ್ಲ. ಜನರು ವಿಶ್ರಾಂತಿ ನೀಡಿದ್ದಾರೆ ಅಷ್ಟೇ’ ಎಂದರು.

‘ಚುನಾವಣೆಗಾಗಿ ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕಾರ್ಯ ಮಾಡಲಾಗುತ್ತಿದೆ ಎನ್ನುವುದು ಸರಿಯಲ್ಲ, ಅಭಿವೃದ್ಧಿ ಸರ್ಕಾರದ ಜವಾಬ್ದಾರಿ. ಅಲ್ಲಿನ ಶಾಸಕರಾಗಿದ್ದವರು ಇಷ್ಟು ದಿನ ನಿಷ್ಕ್ರಿಯರಾಗಿದ್ದರು. ಹಾಗಾಗಿ, ಅಲ್ಲಿನ ಸಮಸ್ಯೆ ಬಗೆಹರಿಸಲು ಸರ್ಕಾರ ಮುಂದಾಗಿದೆ. ₹400 ಕೋಟಿ ಬಿಡುಗಡೆ ಮಾಡಿದೆ. ಚನ್ನಪಟ್ಟಣ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಜೀವನದ ಭಾಗವಾಗಿರುವ ಕಾರಣ ಹೆಚ್ಚು ಕಾಳಜಿ ವಹಿಸಿದ್ದಾರೆ. ರಾಮನಗರಕ್ಕೂ ₹500 ಕೋಟಿ ನೀಡಲಾಗಿದೆ’ ಎಂದು ತಿಳಿಸಿದರು.

‘ಬಿಜೆಪಿ ಟಿಕೆಟ್ ಆಕಾಂಕ್ಷಿ ಸಿ.ಪಿ. ಯೋಗೇಶ್ವರ್ ತಂಡದಲ್ಲಿ ನಿರ್ದೇಶಕರು, ನಟರು, ನಿರ್ಮಾಪಕರು ಇದ್ದಾರೆ. ಈ ಬಗ್ಗೆ ಅವರನ್ನೇ ಕೇಳಬೇಕು. ನನಗೆ ಅವರ ತಂಡದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.