ಬೆಂಗಳೂರು: ಚನ್ನಪಟ್ಟಣ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಅವರೇ ಅಭ್ಯರ್ಥಿ ಆಗಬೇಕು ಎನ್ನುವುದು ಕ್ಷೇತ್ರದ ಕಾರ್ಯಕರ್ತರು ಮತ್ತು ಜನರ ಅಭಿಪ್ರಾಯ. ಆದ್ದರಿಂದ ಅವರನ್ನು ಕಣಕ್ಕಿಳಿಸಲಾಗಿದೆ ಎಂದು ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಹೇಳಿದ್ದಾರೆ.

‘ನನಗೆ ಆರೋಗ್ಯ ಸರಿ ಇಲ್ಲ. ಆರೋಗ್ಯ ಸರಿಯಾದರೆ ಚನ್ನಪಟ್ಟಣದಲ್ಲಿ ಪ್ರಚಾರಕ್ಕೆ ಹೋಗುತ್ತೇನೆ’ ಎಂದು ಅವರು ಸುದ್ದಿಗಾರರ ಜತೆ ಮಾತನಾಡಿ ತಿಳಿಸಿದರು.

‘ನಿಖಿಲ್ ಅವರನ್ನು ಕಣಕ್ಕೆ ಇಳಿಸಲು ಕುಮಾರಸ್ವಾಮಿ ಅವರಿಗೆ ಮನಸ್ಸು ಇರಲಿಲ್ಲ. ಕಾರ್ಯಕರ್ತರನ್ನೇ ನಿಲ್ಲಿಸಬೇಕು ಎಂದುಕೊಂಡಿದ್ದರು. ಕಾರ್ಯಕರ್ತರ ಒತ್ತಡಕ್ಕೆ ಮಣಿಯಬೇಕಾಯಿತು. ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿಯೇ ಇಲ್ಲದ ಕಾರಣ ಯೋಗೇಶ್ವರ್ ಅವರನ್ನು ಎಳೆದುಕೊಂಡರು. ಕಾಂಗ್ರೆಸ್ಗೆ ಇಂತಹ ದಯನೀಯ ಪರಿಸ್ಥಿತಿ ಬರುತ್ತದೆ ಎಂದುಕೊಂಡಿರಲಿಲ್ಲ’ ಎಂದು ರೇವಣ್ಣ ಹೇಳಿದರು.

‘ಚನ್ನಪಟ್ಟಣಕ್ಕೆ ಕಾಂಗ್ರೆಸ್ ಕೊಡುಗೆ ಏನು ಹೇಳಲಿ? ರಾಮನಗರ ಆಸ್ಪತ್ರೆ, ರಸ್ತೆ ಮತ್ತಿತರ ಅಭಿವೃದ್ಧಿ ಕೆಲಸಗಳು ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ನಡೆಯಿತು. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಹಳಿ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಯಡಿಯೂರಪ್ಪ, ವಿಜಯೇಂದ್ರ ಮತ್ತು ಕುಮಾರಸ್ವಾಮಿ ಅವರು ಒಂದಾಗಿದ್ದಾರೆ’ ಎಂದು ಅವರು ಪ್ರತಿಪಾದಿಸಿದರು.

ಕಾಂಗ್ರೆಸ್ನವರು ದೇವೇಗೌಡರ ಕುಟುಂಬವನ್ನು ತುಳಿಯಲು ಹೊರಟಿದ್ದಾರೆ. ಅದು ಸಾಧ್ಯವಿಲ್ಲದ ಮಾತು. ಡಿ.ಕೆ.ಶಿವಕುಮಾರ್ ಅವರ ಆರೋಪಗಳಿಗೆ ಉತ್ತರ ಕೊಡಲು ಹೋದರೆ ಪೊಳ್ಳೆದ್ದು ಹೋಗುತ್ತೇವೆ.

-ರೇವಣ್ಣ ಜೆಡಿಎಸ್ ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.