ಬೆಂಗಳೂರು: ‘ಚದುರಂಗ ಆಡಿದವರೆಲ್ಲಾ ಮುಳುಗಿ ಹೋಗಿದ್ದಾರೆ. ಜನರಿಗೆ ಏನು ಲಾಭವಾಗಿದೆ, ಯಾರ್ಯಾರು ಏನೇನು ಕೆಲಸ ಮಾಡಿದ್ದಾರೆ ಎನ್ನುವುದರ ಆಧಾರದಲ್ಲಿ ಜನ ಈ ಬಾರಿಯ ಚುನಾವಣೆ ತೀರ್ಮಾನ ಮಾಡಲಿದ್ದಾರೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ಚನ್ನಪಟ್ಟಣ ಕ್ಷೇತ್ರಕ್ಕೆ ಡಿ.ಕೆ. ಶಿವಕುಮಾರ್, ಡಿ.ಕೆ. ಸುರೇಶ್, ಸಿ.ಪಿ. ಯೋಗೇಶ್ವರ್ ಮತ್ತು ಕುಮಾರಸ್ವಾಮಿ ಏನು ಕೊಡುಗೆ ಕೊಟ್ಟಿದ್ದಾರೆ ಎನ್ನುವುದನ್ನು ಜನರು ಪಟ್ಟಿ ಮಾಡುತ್ತಾರೆ. ಅದಕ್ಕೆ ಅವರೇ ಅಂಕ ನೀಡುತ್ತಾರೆ. ಅದರ ಹೊರತಾಗಿ ಯಾವ ರಣರಂಗವೂ ಇಲ್ಲ, ಯಾವುದೂ ಇಲ್ಲ’ ಎಂದರು.

‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಯಕನಾದವನು ತನ್ನ ಜನರಿಗೆ ಯಾವ ರೀತಿ ಸಹಾಯ ಮಾಡುತ್ತಾನೆ. ಏನು ಅನುಕೂಲ ಕಲ್ಪಿಸಿ ಕೊಡುತ್ತಾನೆ. ಅವರ ಬದುಕನ್ನು ಯಾವ ರೀತಿ ಬದಲಾವಣೆ ಮಾಡುತ್ತಾನೆ ಎನ್ನುವುದು ಮುಖ್ಯ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.