ಬೆಂಗಳೂರು: ಪದವಿಪೂರ್ವ ಕಾಲೇಜು ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ನೇಮಕಾತಿ ಊರ್ಜಿತತ್ವವನ್ನು ನೇಮಕಾತಿ ಆಗುವವರೆಗೆ ಮುಂದುವರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭರವಸೆ ನೀಡಿದ್ದಾರೆ.

ಈ ಹಿಂದೆ ನೇಮಕಾತಿ ಊರ್ಜಿತತ್ವದ ಅವಧಿ ಒಂದು ವರ್ಷದವರೆಗೆ ಇತ್ತು. ಕೋವಿಡ್ ಕಾರಣದಿಂದ ಕಾಲೇಜುಗಳು ಆರಂಭವಾಗಿಲ್ಲ. ನೇಮಕಗೊಂಡವರಿಗೆ ಅನುಕೂಲ ಮಾಡಿಕೊಡಲು ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಉಪನ್ಯಾಸಕರು ಆತಂಕಕ್ಕೆ ಒಳಗಾಗಬೇಕಿಲ್ಲ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆ ಮತ್ತು ಕೌನ್ಸಲಿಂಗ್ ನಡೆದು ಸ್ಥಳಗಳನ್ನು ನಿಗದಿಪಡಿಸಲಾಗಿದೆ. ಆದರೆ ಕೋವಿಡ್-19 ಪರಿಸ್ಥಿತಿಗಳ ಹಿನ್ನಲೆಯಲ್ಲಿ ಇನ್ನೂ ಕಾಲೇಜುಗಳು ಆರಂಭವಾಗದೆ ಇರುವುದರಿಂದ ಬೋಧಕರಿಗೆ ವರದಿ ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಇದರಿಂದ ಆತಂಕಗೊಂಡ ಉಪನ್ಯಾಸಕರು ಪದವಿಪೂರ್ವ ಶಿಕ್ಷಣ ಇಲಾಖೆ ಮುಂದೆ ಪ್ರತಿಭಟನೆ ಹಮ್ಮಿಕೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.