ಚಿಕ್ಕಮಗಳೂರು:ಎಚ್.ಡಿ.ದೇವೇಗೌಡ ಅವರು ಮುಖ್ಯಮಂತ್ರಿಯಾಗಿದ್ದಾಗ ಹುಬ್ಬಳ್ಳಿಯ ಈದ್ಗಾ ಮೈದಾನದ ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸಿದ್ದರು. ಅವರ ಪುತ್ರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ದತ್ತಪೀಠ ವಿವಾದವನ್ನು ಅದೇ ರೀತಿ ಪರಿಹರಿಸಲು ಕ್ರಮವಹಿಸಬೇಕು ಎಂದು ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಇಲ್ಲಿ ಒತ್ತಾಯಿಸಿದರು.

ದತ್ತ ಪೀಠ ಮುಕ್ತಿಗಾಗಿ ಚಳಿಗಾಲ ಅಧಿವೇಶನದ ಸಂದರ್ಭದಲ್ಲಿ ಶ್ರೀರಾಮ ಸೇನೆ ವತಿಯಿಂದ ಬೆಳಗಾವಿ ಚಲೋ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಮುತಾಲಿಕ್ ಹೇಳಿದ್ದಾರೆ

ಶ್ರೀರಾಮಸೇನೆ ವತಿಯಿಂದ ನಡೆಸುವ ದತ್ತಮಾಲಾ ಅಭಿಯಾನದ ಶೋಭಾಯಾತ್ರೆ ಆರಂಭವಾಗಿದ್ದು, ಇದರಲ್ಲಿ ಪಾಲ್ಗೊಳ್ಳಲು ರಾಜ್ಯದ ವಿವಿಧ ಊರುಗಳಿಂದ ದತ್ತ ಭಕ್ತರು ಆಗಮಿಸುತ್ತಿದ್ದಾರೆ.ಭದ್ರತೆಗಾಗಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.