ಬೆಂಗಳೂರು: ಹಲವು ರಾಜ್ಯಗಳಲ್ಲಿ ಕಬ್ಬಿಣದ ಅದಿರನ್ನು ಅರಣ್ಯ ಉತ್ಪನ್ನ ಎಂದು ಪರಿಗಣಿಸುವುದಿಲ್ಲ. ನಮ್ಮ ರಾಜ್ಯದಲ್ಲೂ ಅದೇ ಮಾದರಿ ಅಳವಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಪ್ರಸ್ತಾವವೊಂದನ್ನು ಮುಂದಿನ ಸಚಿವ ಸಂಪುಟದ ಸಭೆಯಲ್ಲಿ ಮಂಡಿಸುವಂತೆ ಬುಧವಾರ ನಡೆದ ಗಣಿ, ಭೂವಿಜ್ಞಾನ ಹಾಗೂ ಅರಣ್ಯ ಇಲಾಖೆ ಸಭೆಯಲ್ಲಿ ಅವರು ಸೂಚಿಸಿದರು.

ಅರಣ್ಯ ಅಧಿಕಾರಿಗಳು ರಾಜ್ಯದ ಅಭಿವೃದ್ಧಿಯ ಹಿತಾಸಕ್ತಿಗೆ ಪ್ರಾಮುಖ್ಯತೆ ನೀಡಬೇಕು. ರಾಜ್ಯದ ಹಿತಾಸಕ್ತಿ ಮತ್ತು ಅಭಿವೃದ್ಧಿಗೆ ಧಕ್ಕೆ ಮಾಡಿದರೆ ಸಹಿಸಲ್ಲ. ನಿಯಮ ಉಲ್ಲಂಘಿಸದೇ ಕ್ರಿಯಾಶೀಲತೆ ತೋರಬೇಕು ಎಂದು ಅವರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಅರಣ್ಯ ಇಲಾಖೆಯೊಂದಿಗಿನ ಗೊಂದಲಗಳನ್ನು ನಿವಾರಿಸಿಕೊಂಡು ರಾಜಸ್ವ ಸಂಗ್ರಹಣೆಗೆ ತ್ವರಿತ ಕ್ರಮಗಳನ್ನು ತೆಗೆದುಕೊಳ್ಳಬೇಕು. ಗಣಿ ಇಲಾಖೆ ಪ್ರಗತಿಯು ಕಳೆದ ವರ್ಷ ಇದೇ ಅವಧಿಯಲ್ಲಿ ಶೇ 54 ರಷ್ಟು ಇತ್ತು. ಪ್ರಸಕ್ತ ಸಾಲಿನಲ್ಲಿ ಶೇ 46 ರಷ್ಟು ರಾಜಸ್ವ ಸಂಗ್ರಹಣೆ ಆಗಿದೆ. ಅರಣ್ಯ ಇಲಾಖೆಯೊಂದಿಗೆ ಇರುವ ಗೊಂದಲಗಳನ್ನು ನಿವಾರಿಸಿಕೊಂಡು ರಾಜಸ್ವ ಸಂಗ್ರಹಣೆ ತ್ವರಿತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಹೇಳಿದರು.

ಈ ಸಾಲಿಗೆ ರಾಜಸ್ವ ಸಂಗ್ರಹಣೆ ಗುರಿ ₹9,000 ಕೋಟಿ ಇದ್ದು, ಅಕ್ಟೋಬರ್ವರೆಗಿನ ರಾಜಸ್ವ ಸಂಗ್ರಹಣೆ ₹4070.22 ಕೋಟಿ ಆಗಿದೆ ಎಂದರು.

ಸಭೆಯಲ್ಲಿ ಗಣಿ ಭೂವಿಜ್ಞಾನ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಅತೀಕ್, ವಾಣಿಜ್ಯ ಮತ್ತು ಗಣಿ ಇಲಾಖೆ ಕಾರ್ಯದರ್ಶಿ ವಿಪುಲ್ ಬನ್ಸಾಲ್, ಅರಣ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.