ಬೆಂಗಳೂರು: ರಾಜ್ಯದ ವಿದ್ಯುತ್ ಉತ್ಪಾದನೆ ಸ್ಥಾಪಿತ ಸಾಮರ್ಥ್ಯಕ್ಕಿಂತ ಕುಸಿತ ಆಗಿರುವುದು ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ನಡೆದ ಇಂಧನ ಇಲಾಖೆಯ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 32,009 ಮೆಗಾ ವ್ಯಾಟ್ ಉತ್ಪಾದನಾ ಸಾಮರ್ಥ್ಯವಿದ್ದು, ಕಳೆದ ನಾಲ್ಕು ವರ್ಷಗಳಲ್ಲಿ ಉತ್ಪಾದನೆ ಕುಸಿತವಾಗಿರುವುದಕ್ಕೆ ಕಾರಣ ಕೇಳಿದರು.

ನಮ್ಮ ಮೊದಲ ಅವಧಿಯ ಸರ್ಕಾರದಲ್ಲಿ ಎಲ್ಲಾ ಸಮಸ್ಯೆಗಳ ನಡುವೆಯೂ ವಿದ್ಯುತ್ ಉತ್ಪಾದನೆ ದುಪ್ಪಟ್ಟಾಗಿತ್ತು. 2013–14 ರಲ್ಲಿ 14,048 ಮೆಗಾ ವ್ಯಾಟ್ ಉತ್ಪಾದನೆ ಆಗುತ್ತಿತ್ತು. 2017–18 ರ ವೇಳೆಗೆ 27,780 ಮೆಗಾವ್ಯಾಟ್‌ಗೆ ಉತ್ಪಾದನೆ ಏರಿಕೆಯಾಗಿತ್ತು. ಬಹುತೇಕ ದುಪ್ಪಟ್ಟಾಗಿತ್ತು ಎಂದು ಸ್ಮರಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು, ಕೇಂದ್ರದಿಂದ ರಾಜ್ಯಕ್ಕೆ ಹಂಚಿಕೆಯಾಗಿರುವ ಕಲ್ಲಿದ್ದಲಿನ ಗುಣಮಟ್ಟ ಉತ್ತಮವಾಗಿರಲಿಲ್ಲ. ಅಗತ್ಯ ಗುಣಮಟ್ಟ ಇಲ್ಲದ ಕಾರಣ ವಿದ್ಯುತ್ ಉತ್ಪಾದನೆಯ ಮೇಲೆ ಪರಿಣಾಮ ಬೀರುತ್ತಿದೆ. ಈ ವಿಚಾರವನ್ನು ಕೇಂದ್ರದ ಗಮನಕ್ಕೆ ತರಲಾಗಿದೆ. ಪ್ರತಿ ದಿನ ಎರಡು ರೇಕುಗಳಷ್ಟು ಹೆಚ್ಚುವರಿ ಕಲ್ಲಿದ್ದಲು ಹಂಚಿಕೆಗೆ ಕೋರಿದ್ದೇವೆ. ಇದಲ್ಲದೆ ಕಲ್ಲಿದ್ದಲು ಆಮದು ಮಾಡಲೂ ಸಹ ಟೆಂಡರ್ ಕರೆಯಲಾಗಿದೆ ಎಂದರು.

ರಾಜ್ಯದ ಸ್ಥಾಪಿತ ಸಾಮರ್ಥ್ಯಕ್ಕೆ ಅನುಸಾರವಾಗಿ ವಿದ್ಯುತ್ ಉತ್ಪಾದನೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಮತ್ತು ಉಷ್ಣವಿದ್ಯುತ್ ಸ್ಥಾವರಗಳಲ್ಲಿ ತೇವಗೊಂಡ ಕಲ್ಲಿದ್ದಲು ಬಳಕೆ ಮಾಡಬಾರದು ಸಿದ್ದರಾಮಯ್ಯ ಸೂಚಿಸಿದರು.

ನೀರಾವರಿಗೆ ಸೌರ ವಿದ್ಯುತ್ ಪಂಪ್‌ಸೆಟ್‌ಗಳ ಬಳಕೆಯನ್ನು ಉತ್ತೇಜಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಇದರಿಂದ ಅಕ್ರಮ ನೀರಾವರಿ ಪಂಪ್‌ಸೆಟ್ ಹಾವಳಿ ಹಾಗೂ ವಿದ್ಯುತ್ ಪ್ರಸರಣ ಸೋರಿಕೆ ತಡೆಗಟ್ಟಲು ಸಾಧ್ಯ ಎಂಬ ಅಂಶಗಳ ಕುರಿತು ಅಧಿಕಾರಿಗಳು ಮುಖ್ಯಮಂತ್ರಿಯವರ ಗಮನಕ್ಕೆ ತಂದರು.

ಗೃಹ ಜ್ಯೋತಿ ಯೋಜನೆಯಡಿ ಆಗಸ್ಟ್‌ನಲ್ಲಿ 1.26 ಕೋಟಿ ಗ್ರಾಹಕರಿಗೆ ಮತ್ತು ಸೆಪ್ಟೆಂಬರ್‌ನಲ್ಲಿ 1.35 ಕೋಟಿ ಗ್ರಾಹಕರಿಗೆ ಶೂನ್ಯ ಮೊತ್ತದ ವಿದ್ಯುತ್ ಬಲ್ ನೀಡಲಾಗಿದೆ. ಇದಕ್ಕಾಗಿ ₹1400 ಕೋಟಿ ಒದಗಿಸಲಾಗಿದೆ ಎಂದೂ ಅಧಿಕಾರಿಗಳು ಹೇಳಿದರು.

ಎಸ್ಕಾಂಗಳ ಆರ್ಥಿಕ ಸ್ಥಿತಿಗತಿ ಕುರಿತೂ ಸಭೆಯಲ್ಲಿ ಚರ್ಚಿಸಲಾಯಿತು. ವಿದ್ಯುತ್ ಸೋರಿಕೆ ಕುರಿತಂತೆ ರಾಜ್ಯದ ಎಲ್ಲ ಎಸ್ಕಾಂಗಳೂ ಹೆಚ್ಚಿನ ಗಮನಹರಿಸುವಂತೆ ಸಿದ್ದರಾಮಯ್ಯ ಸೂಚಿಸಿದರು. ಅಲ್ಲದೆ, ಅಗತ್ಯವಿರುವಲ್ಲಿ ಟ್ರಾನ್ಸ್‌ಫಾರ್ಮರ್ ಅಳವಡಿಕೆ ಹಾಗೂ ವಿದ್ಯುತ್ ಉಪಕೇಂದ್ರಗಳ ಸ್ಥಾಪನೆಗೆ ಕ್ರಮ ವಹಿಸಬೇಕು ಎಂದರು.

ಪ್ರಸಕ್ತ ವರ್ಷದಲ್ಲಿ ವಿದ್ಯುತ್ ಉಪಕೇಂದ್ರಗಳ ಸ್ಥಾಪನೆಗಾಗಿ ₹2500 ಕೋಟಿ ಒದಗಿಸಲಾಗಿದೆ. ರಾಜ್ಯ ಪ್ರಸ್ತಕ ವಿದ್ಯುತ್ ಪರಿಸ್ಥಿತಿ ಕುರಿತು ಹಾಗೂ ಆರ್ಥಿಕ ಸ್ಥಿತಿಗತಿ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸುವುದು ಸೂಕ್ತ ಎಂದು ಮುಖ್ಯಮಂತ್ರಿ ಸಲಹೆ ನೀಡಿದರು. ಸಭೆಯಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್ ಮತ್ತು ಹಿರಿಯ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.