ಚಿತ್ರದುರ್ಗ: ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಅವರನ್ನು ಹನಿಟ್ರ್ಯಾಪ್ ಮಾಡಲು ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದ್ದು, ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಶಾಸಕರ ಮೊಬೈಲ್ ಫೋನ್ ಗೆ ವಿಡಿಯೊ ಕರೆ ಮಾಡಿದ ಯುವತಿ ವಿವಸ್ತ್ರಗೊಂಡು ಅಶ್ಲೀಲವಾಗಿ ಮಾತನಾಡಿದ್ದಾರೆ. ಇದರಿಂದ ಅನುಮಾನಗೊಂಡ ಶಾಸಕರು ಕರೆ ಸ್ಥಗಿತಗೊಳಿಸಿದ್ದಾರೆ.

'ಯುವತಿ ಮೂರು ಬಾರಿ ವಿಡಿಯೊ ಕರೆ ಮಾಡಿದ್ದರು. ಕರೆ ಸ್ಥಗಿತಗೊಳಿಸಿ ಫೋನ್ ನಂಬರ್ ಬ್ಲ್ಯಾಕ್ ಮಾಡಿದ್ದೇನೆ. ಪೊಲೀಸ್ ಠಾಣೆಗೆ ದೂರು ನೀಡಿದ್ದೇನೆ' ಎಂದು ಶಾಸಕ ತಿಪ್ಪಾರೆಡ್ಡಿ ಮಾದ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ್ದಾರೆ.

ಐಟಿ ಕಾಯ್ದೆಯ 66 (ಎ) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ರಾಜಸ್ಥಾನ ಅಥವಾ ಓಡಿಸಾ ರಾಜ್ಯದಿಂದ ವಿಡಿಯೊ ಬಂದಿರುವ ಅನುಮಾನ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.