ಬೆಂಗಳೂರು: ಚಿತ್ರದುರ್ಗದ, ‘ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ‘ಕ್ಕೆ (ಎಸ್‌ಜೆಎಂ) ತಾತ್ಕಾಲಿಕ ಆಡಳಿತಾಧಿಕಾರಿಯನ್ನಾಗಿ ಜಿಲ್ಲಾ ಪ್ರಧಾನ ನ್ಯಾಯಾಧೀಶರನ್ನು ನೇಮಕ ಮಾಡಿ ಹೈಕೋರ್ಟ್ ಆದೇಶಿಸಿದೆ.

ಈ ಕುರಿತ ಮೇಲ್ಮನವಿಯನ್ನು ಸೋಮವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠವು, ‘ಚಿತ್ರದುರ್ಗ ಜಿಲ್ಲಾ ಪ್ರಧಾನ ನ್ಯಾಯಾಧೀಶರು ಮಂಗಳವಾರ (ಜುಲೈ 4) ಬೆಳಗ್ಗೆ 11 ಗಂಟೆಗೆ ಮಠದ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಬೇಕು‘ ಎಂದು ನಿರ್ದೇಶಿಸಿದೆ.

’ಜಿಲ್ಲಾ ನ್ಯಾಯಾಧೀಶರು ಯಾವುದೇ ಪ್ರಮುಖ ನೀತಿ ನಿರ್ಧಾರ ಕೈಗೊಳ್ಳಬಾರದು. ಮಠ ಮತ್ತು ವಿದ್ಯಾಪೀಠದ ದೈನಂದಿನ ವ್ಯವಹಾರಗಳನ್ನು ಮಾತ್ರವೇ ನಿಭಾಯಿಸಬೇಕು. ಈ ನಿಟ್ಟಿನಲ್ಲಿ ಯಾವುದಾದರೂ ನೆರವು ಬೇಕಾದಲ್ಲಿ ಚಿತ್ರದುರ್ಗ ಜಿಲ್ಲಾಧಿಕಾರಿಯನ್ನು ಲಿಖಿತವಾಗಿ ಕೋರಬಹುದು. ಅದರನ್ವಯ ಜಿಲ್ಲಾಧಿಕಾರಿ ತಕ್ಷಣವೇ ಅಗತ್ಯ ನೆರವು ಕಲ್ಪಿಸಬೇಕು‘ ಎಂದು ನಿರ್ದೇಶಿಸಿದೆ. ಮೇಲ್ಮನವಿಗೆ ಸಂಬಂಧಿಸಿದಂತೆ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಇದೇ 18ಕ್ಕೆ ಮುಂದೂಡಿದೆ.

ಪ್ರಕರಣವೇನು?

‘ಮುರುಘಾಮಠದ ಪೀಠಾಧಿಪತಿ ಶಿವಮೂರ್ತಿ ಶರಣರು ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ) ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ. ಪೊಲೀಸರು 2022ರ ಸೆಪ್ಟೆಂಬರ್ 1ರಂದು ಅವರನ್ನು ಬಂಧಿಸಿದ್ದು ಅಂದಿನಿಂದಲೂ ಅವರು ಚಿತ್ರದುರ್ಗ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ, ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರವು ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್.ವಸ್ತ್ರದ ಅವರನ್ನು 2022ರ ಡಿಸೆಂಬರ್ 13ರಂದು ಮಠಕ್ಕೆ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿತ್ತು. ಅವರು 2022ರ ಡಿಸೆಂಬರ್ 15ರಂದು ಅಧಿಕಾರ ಸ್ವೀಕರಿಸಿದ್ದರು.

ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ಮಠದ ತಾತ್ಕಾಲಿಕ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಮತ್ತು ಭಕ್ತರು, ಹೈಕೋರ್ಟ್ ಮೆಟ್ಟಿಲೇರಿದ್ದರು. ರಿಟ್ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಆಡಳಿತಾಧಿಕಾರಿ ನೇಮಕವನ್ನು ರದ್ದುಪಡಿಸಿ, ’ಮಠ ಮಾನ್ಯಗಳಲ್ಲಿ ಸರ್ಕಾರದ ಹಸ್ತಕ್ಷೇಪ ಸಲ್ಲದು‘ ಎಂಬ ಅಭಿಪ್ರಾಯ ವ್ಯಕ್ತಪಡಿಸಿತ್ತು.

ಅಂತೆಯೇ, ’ಶರಣರು ಜೈಲಿನಲ್ಲಿರುವ ಕಾರಣ, ಮಠ, ವಿದ್ಯಾಪೀಠ ಹಾಗೂ ಶೈಕ್ಷಣಿಕ ಸಂಸ್ಥೆಗಳ ಆಡಳಿತ ನಿರ್ವಹಣೆಗಾಗಿ ಮಠದ ಭಕ್ತರು, ವೀರಶೈವ, ಲಿಂಗಾಯತ ಸಮುದಾಯದ ಮುಖಂಡರು ಆರು ವಾರಗಳ ಒಳಗಾಗಿ ಮಧ್ಯಂತರ ವ್ಯವಸ್ಥೆ ಮಾಡಿಕೊಳ್ಳಬೇಕು. ಅಲ್ಲಿಯವರೆಗೆ ಸರ್ಕಾರ ನೇಮಿಸಿರುವ ಆಡಳಿತಾಧಿಕಾರಿಯನ್ನು ಮುಂದುವರಿಸಲಾಗುತ್ತಿದೆ‘ ಎಂದು ನಿರ್ದೇಶಿಸಿತ್ತು. ಏಕಸದಸ್ಯ ನ್ಯಾಯಪೀಠದ ಈ ಆದೇಶವನ್ನು ಪ್ರಶ್ನಿಸಿ ಮಾಜಿ ಸಚಿವ ಎಚ್.ಏಕಾಂತಯ್ಯ ಹಾಗೂ ಇತರರು ಮೇಲ್ಮನವಿ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.