ಬೆಂಗಳೂರು: ‘ಕೆಲವರು ಸುಳ್ಳು ಜಾತಿ ಪತ್ರಗಳನ್ನು ಪಡೆಯುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಆದ್ದರಿಂದ, ಜಾತಿ ಪ್ರಮಾಣ ಪತ್ರದ ಬಗ್ಗೆ ಇರುವ ಗೊಂದಲಗಳನ್ನು ನಿವಾರಿಸಲು ಸೂಕ್ತ ಸುತ್ತೋಲೆ ಹೊರಡಿಸುವಂತೆ ಸಮಾಜ ಕಲ್ಯಾಣ ಮತ್ತು ಕಾನೂನು ಇಲಾಖೆ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದಲ್ಲಿ ನಡೆದ ಪರಿಶಿಷ್ಟ ಪಂಗಡದ ಸಮುದಾಯ ಪ್ರಗತಿ ಪರಿಶೀಲನಾ ಸಭೆ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿ ಈ ವಿಷಯ ತಿಳಿಸಿದರು.

₹13 ಕೋಟಿ ವಸೂಲಿ ಬಾಕಿ:

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಸುಮಾರು ₹89.63 ಕೋಟಿ ಮೊತ್ತದಷ್ಟು ಅವ್ಯವಹಾರವಾಗಿತ್ತು. ಇದರಲ್ಲಿ ₹5 ಕೋಟಿ ವಾಪಸ್ ಪಡೆಯಲಾಗಿದೆ. ಉಳಿದ ₹84.63 ಕೋಟಿಯಲ್ಲಿ ₹71.54 ಕೋಟಿ ವಸೂಲಿ ಮಾಡಲಾಗಿದೆ. ಉಳಿದ ₹13 ಕೋಟಿಯನ್ನು ವಸೂಲಿ ಮಾಡಿ ಕೊಡುವುದಾಗಿ ಎಸ್ಐಟಿ ತಿಳಿಸಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಈ ರೀತಿ ಒಟ್ಟು ಅವ್ಯವಹಾರವಾಗಿದ್ದ ಪೂರ್ಣ ಮೊತ್ತವನ್ನು ವಾಪಸ್ ಪಡೆಯಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪಿನಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಈ ವರ್ಷದಲ್ಲಿ ನಿಗದಿಪಡಿಸಲಾಗಿರುವ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಒದಗಿಸಲಾಗುವುದು ಎಂದು ಅವರು ಸಿದ್ದರಾಮಯ್ಯ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.