ಬೆಂಗಳೂರು: ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಹುಸ್ಕೂರ್ ಬಳಿಯ ಜಿ.ಆರ್.ಪಾರ್ಕ್ ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ತೆಲುಗು ನಟಿ ಹೇಮಾ ಸಹ ಪಾಲ್ಗೊಂಡಿದ್ದರು ಎಂದು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಅವರು ಖಚಿತ ಪಡಿಸಿದರು.

ನಗರದಲ್ಲಿ ಮಂಗಳವಾರ ಮಾತನಾಡಿದ ಅವರು, ಹೇಮಾ ಅವರ ರಕ್ತ ಮಾದರಿ ಸಂಗ್ರಹಿಸಲಾಗಿದೆ. ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಅವರು ಡ್ರಗ್ಸ್ ಸೇವಿಸಿದ್ದರೆ ಇಲ್ಲವೇ ಎಂಬುದು ಗೊತ್ತಾಗಲಿದೆ ಎಂದು ಹೇಳಿದರು.

ಸಿಸಿಬಿ ದಾಳಿ ವೇಳೆ ನಟಿ ಇದ್ದರು ಎಂಬ ಮಾಹಿತಿ ಸಿಕ್ಕಿತ್ತು. ಆದರೆ, ಹೇಮಾ ಅವರೇ ವಿಡಿಯೊ ಮಾಡಿ, ನಾನು ಪಾರ್ಟಿಯಲ್ಲಿ ಪಾಲ್ಗೊಂಡಿಲ್ಲ. ನಾನು ಹೈದರಾಬಾದ್ ನಲ್ಲಿ ಇದ್ದೇನೆ ಎಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು.
.ಎಲೆಕ್ಟ್ರಾನಿಕ್ ಸಿಟಿ GR ಫಾರ್ಮ್ಹೌಸ್ನಲ್ಲಿ ರೇವ್ ಪಾರ್ಟಿ: ಐವರ ಬಂಧನ.
ರೇವ್ ಪಾರ್ಟಿಯಲ್ಲಿ ಇದುವರೆಗೂ ಬಂಧಿಸಿರುವ ಐವರು ಆರೋಪಿಗಳ ವಿಚಾರಣೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.