ಬೆಂಗಳೂರು: ರಾಜ್ಯದ ಕೋವಿಡ್ ಸ್ಥಿತಿ ಗತಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಸಚಿವರು ಹಾಗೂಅಧಿಕಾರಿಗಳ ಜೊತೆ ಸಭೆನಡೆಸಿದ್ದಾರೆ.

ಸಭೆಗಳ ಮುಖ್ಯಾಂಶಗಳು ಇಂತಿವೆ.

1. ಕೋವಿಡ್ ಮುಂಜಾಗ್ರತೆ ಕ್ರಮವಾಗಿ ಜಾರಿಗೊಳಿಸುವ ಮಾರ್ಗಸೂಚಿಗಳನ್ನು ಈ ತಿಂಗಳ ಅಂತ್ಯದವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ.

2. ಶಾಲಾ ಮಕ್ಕಳಲ್ಲಿ ಕೋವಿಡ್ ಹೆಚ್ಚುತ್ತಿರುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಪ್ರಕರಣಗಳನ್ನು ಆಧರಿಸಿ ಬಿಇಓ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳ ವರದಿಯನ್ನು ಆಧರಿಸಿ, ಶಾಲೆಗಳನ್ನು ಮುಚ್ಚುವ ಕುರಿತು ತೀರ್ಮಾನ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲು ತೀರ್ಮಾನಿಸಲಾಗಿದೆ.

3. ತಾಲ್ಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತ ಮಕ್ಕಳಿಗೆ ಚಿಕಿತ್ಸೆ ನೀಡಲು ಮಕ್ಕಳ ವಾರ್ಡ್, ಐಸಿಯುಗಳನ್ನು ಮೀಸಲಿರಿಸಲು ಸೂಚಿಸಲಾಗಿದೆ.

ಪಾದಯಾತ್ರೆಯಲ್ಲಿಭಾಗವಹಿಸಿದ್ದಎಚ್.ಎಂ. ರೇವಣ್ಣ, ಸಿ.ಎಂ ಇಬ್ರಾಹಿಂಗೆ ಕೋವಿಡ್

4. ಕೋವಿಡ್ ಸೋಂಕಿತ ಮಕ್ಕಳ ಚಿಕಿತ್ಸೆಗೆ ಅಗತ್ಯವಿರುವ ಔಷಧಿಗಳನ್ನು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಮಾಡಿಕೊಳ್ಳುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಲು ನಿರ್ಧರಿಸಲಾಗಿದೆ.

5. ಶಿಕ್ಷಣ ಮತ್ತು ಆರೋಗ್ಯ ಇಲಾಖೆಗಳು ಜಂಟಿಯಾಗಿ ಎಲ್ಲ ಶಾಲೆಗಳಲ್ಲಿ 15 ದಿನಗಳಿಗೊಮ್ಮೆ ಮಕ್ಕಳ ಸಾಮಾನ್ಯ ಆರೋಗ್ಯ ತಪಾಸಣೆ ಮಾಡುವಂತೆ ಸೂಚಿಸಲಾಗಿದೆ.

6. ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ಮುಂಜಾಗ್ರತಾ ಕ್ರಮವಾಗಿ ವಿಧಿಸಿರುವ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಲಾಗಿದೆ.

7. ಮೂರನೇ ಅಲೆಯಲ್ಲಿ ಹೋಮ್ ಐಸೋಲೇಷನ್ ನಲ್ಲಿ ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇವರ ಆರೋಗ್ಯ ಸ್ಥಿತಿಯ ಮೇಲ್ವಿಚಾರಣೆಯನ್ನು ನಿಯಮಿತವಾಗಿ ಮಾಡುವಂತೆ ಹಾಗೂ ಸೂಕ್ತ ಔಷಧಿಗಳ ಕಿಟ್ ಅನ್ನು ಒದಗಿಸುವಂತೆ ಸಿಎಂ ಸೂಚಿಸಿದ್ದಾರೆ.

8. ಪರೀಕ್ಷಾ ವರದಿ ಬಂದ ಕೂಡಲೇ ಸೋಂಕಿತರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿ, ಆಸ್ಪತ್ರೆಗೆ ದಾಖಲಿಸುವ ಅಗತ್ಯವಿದೆಯೇ ಇಲ್ಲವೇ ಎಂದು ನಿರ್ಧರಿಸುವ ಟ್ರಯಾಜಿಂಗ್ ವ್ಯವಸ್ಥೆಯನ್ನು ಬಲಪಡಿಸುವಂತೆ ಸೂಚಿಸಲಾಗಿದೆ.

9. ಹೋಮ್ ಐಸೊಲೇಷನ್ ಮತ್ತು ಟ್ರಯಾಜಿಂಗ್ ಪ್ರಕ್ರಿಯೆಯಲ್ಲಿ ಹೌಸ್ ಸರ್ಜನ್ ವೈದ್ಯರು ಹಾಗೂ ಅಂತಿಮ ವರ್ಷದ ನರ್ಸಿಂಗ್ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲು ನಿರ್ಧರಿಸಲಾಗಿದೆ.

ಮೇಕೆದಾಟು ಪಾದಯಾತ್ರೆ: ಡಿಕೆಶಿ ಪರೀಕ್ಷೆಗೆ ಬಂದಿದ್ದ ಹೆಚ್ಚುವರಿ ಡಿ.ಸಿಗೆ ಕೋವಿಡ್

10. ಬೆಂಗಳೂರಿನಲ್ಲಿ ಕೂಡಲೇ 27 ಕೋವಿಡ್ ಕೇರ್ ಸೆಂಟರುಗಳನ್ನು ಪ್ರಾರಂಭಿಸಲು ಸೂಚಿಸಿದ್ದಾರೆ ಸಿಎಂ.

11. ಮುಂಬರುವ ಸಂಕ್ರಾಂತಿ, ವೈಕುಂಠ ಏಕಾದಶಿ ಮತ್ತಿತರ ಹಬ್ಬಗಳ ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಹೊರಡಿಸುವಂತೆ ಕಂದಾಯ ಮತ್ತು ಮುಜರಾಯಿ ಇಲಾಖೆಗೆ ಸೂಚಿಸಲಾಗಿದೆ.

12. ಕೋವಿಡ್ ಲಸಿಕೆಯ ಎರಡೂ ಡೋಸ್ ಗಳನ್ನು ಪಡೆದು 9 ತಿಂಗಳು ಪೂರೈಸಿದ ಮುಂಚೂಣಿಯ ಕಾರ್ಯಕರ್ತರಿಗೆ 3ನೇ ಡೋಸ್ ಅನ್ನು ಆದ್ಯತೆಯ ಮೇರೆಗೆ ನೀಡಲು ಸೂಚಿಸಿದ್ದಾರೆ.

13. ಬಿಬಿಎಂಪಿ ವ್ಯಾಪ್ತಿಯಲ್ಲಿ ಪರೀಕ್ಷಾ ಪ್ರಮಾಣವನ್ನು ದಿನಕ್ಕೆ 1.3 ಲಕ್ಷ ವರೆಗೆ ಹೆಚ್ಚಿಸಲು ಸೂಚಿಸಲಾಗಿದೆ.

ಮೇಕೆದಾಟು: ಮೂರನೇ ದಿನದ ಪಾದಯಾತ್ರೆಗೆ ಜನಸಾಗರ!

14. ಯಾವುದೇ ರೀತಿಯ ಸಾರ್ವಜನಿಕ ಸಮಾವೇಶಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.

15. ಮಾರುಕಟ್ಟೆ ಪ್ರದೇಶದಲ್ಲಿ ಜನದಟ್ಟಣೆ ಕಡಿಮೆಗೊಳಿಸಲು ವಸ್ತುಸ್ಥಿತಿ ಆಧರಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

16. ರಾಜ್ಯದಲ್ಲಿ ಯಾವುದೇ ರೀತಿಯ ಸಿದ್ಧತೆಯಲ್ಲಿ ಲೋಪವಾಗದಂತೆ ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.
ಸಭೆಯಲ್ಲಿ ಸಚಿವರಾದ ಡಾ.ಕೆ. ಸುಧಾಕರ್, ಬಿ.ಸಿ. ನಾಗೇಶ್, ಆರಗ ಜ್ಞಾನೇಂದ್ರ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ. ಸುದರ್ಶನ್ ಮತ್ತು ಇತರ ಸದಸ್ಯರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕೋವಿಡ್ ಪೀಡಿತ ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.