ನವದೆಹಲಿ: ‘ಕರ್ನಾಟಕದ ಜನರ ನೆರವಿಗಾಗಿ ಮೇಕೆದಾಟು ಯೋಜನೆ ಕೈಗೆತ್ತಿಕೊಂಡು, ಕುಡಿಯುವ ನೀರಿನ ಬವಣೆ ತೀರಿಸುತ್ತೇವೆ. ಯಾರಾದರೂ ಉಪವಾಸ ಕುಳಿತುಕೊಳ್ಳಲಿ, ಊಟವನ್ನಾದರೂ ಮಾಡಲಿ ನಮಗೆ ಸಂಬಂಧವಿಲ್ಲ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಾರವಾಗಿ ನುಡಿದರು.

ಮೇಕೆದಾಟು ಯೋಜನೆಗೆ ಅನುಮತಿ ನೀಡದಂತೆ ಆಗ್ರಹಿಸಿ ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ನಿವೃತ್ತ ಐಪಿಎಸ್ ಅಧಿಕಾರಿ ಅಣ್ಣಾಮಲೈ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ‘ಕಾವೇರಿಯ ಹೆಚ್ಚುವರಿ ನೀರನ ಮೇಲೆ ನಮಗೆ ಹಕ್ಕಿದೆ. ನಾವು ಯೋಜನೆ ಕೈಗೆತ್ತಿಕೊಳ್ಳುವುದು ಶತಸಿದ್ಧ’ ಎಂದು ಅವರು ಹೇಳಿದರು.

ಶುಕ್ರವಾರ ಬೆಳಿಗ್ಗೆ ನವದೆಹಲಿಗೆ ಬಂದಿದ್ದ ಮುಖ್ಯಮಂತ್ರಿ ಬೊಮ್ಮಾಯಿ, ಸಚಿವ ಸಂಪುಟದ ವಿಸ್ತರಣೆಗೆ ಸಂಬಂಧಿಸಿದಂತೆ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಚರ್ಚೆ ನಡೆಸಿದ ಬಳಿಕ ಶನಿವಾರ ಮಧ್ಯಾಹ್ನ ಬೆಂಗಳೂರಿಗೆ ತೆರಳಿದರು.

ಇದನ್ನೂ ಓದಿ... ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಮುಂದಿನ ಚುನಾವಣೆ: ಕೆ.ಎಸ್.ಈಶ್ವರಪ್ಪ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.