ಬೆಂಗಳೂರು: ‘ದೇಶದಲ್ಲಿ 70 ವರ್ಷಗಳಲ್ಲಿ ಏನೂ ಅಭಿವೃದ್ಧಿಯಾಗಿಲ್ಲ. 55 ತಿಂಗಳಲ್ಲಿ ನಾವೇ ಎಲ್ಲ ಅಭಿವೃದ್ಧಿ ಮಾಡಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಆದರೆ, ಅವರಿಗೆ ನಮ್ಮ ಮಾತುಗಳು ಹಾಗೂ ತೀರ್ಮಾನಗಳು ಅರ್ಥವಾಗುವುದಿಲ್ಲ’ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ವಿಧಾನಸೌಧದಲ್ಲಿ ಬುಧವಾರ ನಡೆದ ಕೃಷಿ ಪಂಡಿತ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ‘ನಿಮಗೆ (ರೈತರಿಗೆ) ಪ್ರಧಾನಿ ಭಾಷಣ ಬಹಳ ಚೆನ್ನಾಗಿದೆ ಅನಿಸಬಹುದು. ಆದರೆ, ಅವರ ತೀರ್ಮಾನಗಳು ಅನುಷ್ಠಾನವಾಗುವಂಥದ್ದಲ್ಲ’ ಎಂದರು.

‘ಕಳೆದ ನಾಲ್ಕೂವರೆ ವರ್ಷಗಳಲ್ಲಿ ಮೋದಿ ಅವರು ರೈತರ ಪರ ಕೆಲಸ ಮಾಡಲಿಲ್ಲ. ಚುನಾವಣೆ ಹತ್ತಿರವಾದ ಕೂಡಲೇ ರೈತರ ನೆನಪಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.