ಬೆಂಗಳೂರು: ‘ಸಮ್ಮಿಶ್ರ ಸರ್ಕಾರಕ್ಕೆ ಇದೇ ರೀತಿ ತೊಂದರೆ ನೀಡಿದರೆ ನಾನು ಸುಮ್ಮನಿರುವುದಿಲ್ಲ. ಬಿಜೆಪಿ ವಿರುದ್ಧ ದಂಗೆ ಏಳುವಂತೆ ನಾಡಿನ ಜನರಿಗೆ ಕರೆ ಕೊಡುತ್ತೇವೆ’ ಎಂದು ಎಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.

ಚನ್ನರಾಯಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ವಿಷಯದಲ್ಲಿ ಬಿಜೆಪಿಯವರು ಹುಡುಗಾಟ ಆಡುವುದನ್ನು ನಿಲ್ಲಿಸಬೇಕು. ಅವರೊಬ್ಬರೇ ಅಧಿಕಾರದಲ್ಲಿ ಇರಬೇಕಾ’ ಎಂದು ಕಿಡಿಕಾರಿದರು.

ಇದಕ್ಕೆ ಬೆಂಗಳೂರಿನಲ್ಲಿ ತಿರುಗೇಟು ಕೊಟ್ಟಿರುವ ಬಿಜೆಪಿ ನಾಯಕರು, ಜನ ದಂಗೆ ಏಳಬೇಕು ಎಂದು ಕರೆ ನೀಡಿರುವ ಮುಖ್ಯಮಂತ್ರಿ ವಿರುದ್ಧ ಪೊಲೀಸರು ಮೊಕದ್ದಮೆ ದಾಖಲಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.

‘ಈ ವಿಚಾರದಲ್ಲಿ ರಾಜ್ಯಪಾಲರು ತಕ್ಷಣವೇ ಮಧ್ಯಪ್ರವೇಶ ಮಾಡಿ ಕುಮಾರಸ್ವಾಮಿಗೆ ಎಚ್ಚರಿಕೆ ನೀಡಬೇಕು. ಅಲ್ಲದೆ, ರಾಜ್ಯಪಾಲರಿಗೆ ದೂರು ನೀಡಲು ಚಿಂತನೆ ನಡೆಸಲಾಗಿದೆ’ ಎಂದು ವಿಧಾನಸಭೆ ವಿರೋಧಪಕ್ಷದ ಉಪನಾಯಕ ಗೋವಿಂದ ಕಾರಜೋಳ ತಿಳಿಸಿದರು.

ದಂಗೆ ಮತ್ತು ರಕ್ತ ಕಾಂತ್ರಿಗೆ ಕರೆ ನೀಡುವವರು ನಕ್ಸಲರೇ ಹೊರತು ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟವರಲ್ಲ. ಕುಮಾರಸ್ವಾಮಿ ಹೇಳಿಕೆ ದೇಶದ್ರೋಹದ್ದಾಗಿದೆ ಎಂದು ಶಾಸಕ ಆರ್.ಅಶೋಕ್ ತಿಳಿಸಿದರು.

‘ದಂಗೆ ಏಳಿ’ ಹೇಳಿಕೆಯನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಶುಕ್ರವಾರ ಬಿಜೆಪಿ ಪ್ರತಿಭಟನೆ ನಡೆಸಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.