ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಮದ್ಯ ಮಾರಾಟಗಾರರ ಸಂಘ ಕರೆ ನೀಡಿದ್ದ ಬುಧವಾರದ (ನ. 20) ಮದ್ಯ ಮಾರಾಟ ಬಂದ್ ಅನ್ನು ವಾಪಸ್ ಪಡೆದುಕೊಂಡಿದೆ.

ಸಂಘದ ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಕಾರಣ ಸಂಘದ ಪದಾಧಿಕಾರಿಗಳು ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪದ ಜೊತೆಗೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಒಂದು ದಿನ ಪ್ರತಿಭಟನೆ ನಡೆಸಲು ಸಂಘ ಮುಂದಾಗಿತ್ತು. ಸಂಘದ ಸದಸ್ಯರ ಜೊತೆ ಗೃಹ ಕಚೇರಿ ಕೃಷ್ಣದಲ್ಲಿ ಮಂಗಳವಾರ ಮುಖ್ಯಮಂತ್ರಿ ಚರ್ಚೆ ನಡೆಸಿದರು.

‘ಮದ್ಯ ಮಾರಾಟಗಾರರ ಸಂಘದ ಪದಾಧಿಕಾರಿಗಳ ಜೊತೆ ಮುಖ್ಯಮಂತ್ರಿ ನಡೆಸಿದ ಸಭೆ ಯಶಸ್ವಿಯಾಗಿದೆ. ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ರಾಜ್ಯಪಾಲರಿಗೆ ನಾವು ದೂರು ಕೊಟ್ಟಿಲ್ಲ. ಈ ಬಗ್ಗೆ ಸುಳ್ಳು ಹಬ್ಬಿಸಿದ್ದಾರೆ. ದೂರು ಕೊಟ್ಟವರಿಗೂ ನಮಗೂ ಯಾವುದೇ ಸಂಬಂಧವೇ ಇಲ್ಲ. ಬೇಕಿದ್ದರೆ ಈ ಬಗ್ಗೆ ತನಿಖೆ ನಡೆಸುವಂತೆ ಪದಾಧಿಕಾರಿಗಳು ಸಭೆಯಲ್ಲಿ ಸ್ಪಷ್ಟಪಡಿಸಿದರು’ ಎಂದು ಮುಖ್ಯಮಂತ್ರಿ ಸಚಿವಾಲಯ ತಿಳಿಸಿದೆ.

‘ನಮ್ಮ ಬೇಡಿಕೆಗಳಿಗೆ ಸಂಬಂಧಿಸಿದಂತೆ ಸಂಘದ ಪದಾಧಿಕಾರಿಗಳ ಜೊತೆ ಚರ್ಚಿಸಿ 10 ದಿನಗಳ ಒಳಗೆ ವರದಿ ನೀಡುವಂತೆ ಆರ್ಥಿಕ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಕಾರ್ಯದರ್ಶಿ ಪಿ.ಸಿ. ಜಾಫರ್ ಮತ್ತು ಅಬಕಾರಿ ಇಲಾಖೆಯ ಆಯುಕ್ತ ರವಿಶಂಕರ್ ಅವರಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಹೀಗಾಗಿ, ಮದ್ಯ ಮಾರಾಟ ಬಂದ್ ಹಿಂಪಡೆದಿದ್ದೇವೆ’ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್ ಹೆಗ್ಡೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.