ಬೆಂಗಳೂರು: ರಾಜ್ಯದ ಪ್ರವಾಹ ಸಂತ್ರಸ್ತರ ಪರಿಹಾರಕ್ಕಾಗಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ಸಾರ್ವಜನಿಕರು, ಸಂಘ–ಸಂಸ್ಥೆಗಳಿಂದ ಈವರೆಗೆ ₹99.59 ಕೋಟಿ ಸಂಗ್ರಹವಾಗಿದೆ.

ಜುಲೈ 9 ರಿಂದ ಸೆಪ್ಟಂಬರ್ 12 ರವರೆಗೆ ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ಈವರೆಗೆ ₹99,59,87,175 ಸಂಗ್ರಹವಾಗಿದೆ. ಕಳೆದ ವರ್ಷ ಕೊಡಗು ಜಿಲ್ಲೆ ಪ್ರಕೃತಿ ವಿಕೋಪ ಪರಿಹಾರಕ್ಕಾಗಿ ಸಂಗ್ರಹವಾಗಿದ್ದ ಒಟ್ಟು ಹಣದಲ್ಲಿ₹97.17 ಕೋಟಿ ಬಳಕೆಯಾಗದೇ ಖಾತೆಯಲ್ಲೇ ಉಳಿದಿದೆ. ಇದರಿಂದಖಾತೆಯಲ್ಲಿ ₹196.77 ಕೋಟಿ ಲಭ್ಯವಿದ್ದು, ಅದನ್ನು ಪರಿಹಾರ ಕಾರ್ಯಕ್ಕಾಗಿ ಬಳಸಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಕಚೇರಿಯ ಮೂಲಗಳು ಹೇಳಿವೆ.

2018 ರಲ್ಲಿ ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದ ಪರಿಹಾರ ಕಾರ್ಯಕ್ಕಾಗಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ಒಟ್ಟು ₹195.61 ಕೋಟಿ ಸಂಗ್ರಹವಾಗಿತ್ತು.₹ 98.43 ಕೋಟಿ ಬಳಕೆ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.