ದೆಹಲಿ: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು (ಶುಕ್ರವಾರ) ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಉಪಸ್ಥಿತರಿದ್ದರು.

ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಕಾಂಗ್ರೆಸ್ ತನ್ನ ಅಧಿಕೃತ ಖಾತೆಯಲ್ಲಿ ಚಿತ್ರವನ್ನು ಹಂಚಿಕೊಂಡಿದೆ. ದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಮಾತುಕತೆ ನಡೆದಿದೆ.

ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದು ಸೇರಿದಂತೆ ಪ್ರಸಕ್ತ ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಹೈಕಮಾಂಡ್ ಜೊತೆ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
.ಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯ ಪತ್ನಿಯ ಪತ್ರದ ‘ವೈಟ್ನರ್’ ಹಿಂದೆ ಏನಿದೆ?.ಹೆದರಿದ್ದು ನಾನಲ್ಲ, ಸಿಎಂ; ಸುಳ್ಳು ಆರೋಪಗಳಿಗೆ ಉತ್ತರ ನೀಡಿದ್ದೇನೆ: ಕುಮಾರಸ್ವಾಮಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.