ಬೆಂಗಳೂರು: ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ವಾಣಿಜ್ಯ ತೆರಿಗೆ ಸಂಗ್ರಹದ ಬೆಳವಣಿಗೆ ದರ ಶೇ 19.2ರಷ್ಟಿದ್ದು, ಈ ಬೆಳವಣಿಗೆ ದರ ಇಡೀ ದೇಶದಲ್ಲಿಯೇ ಅತಿ ಹೆಚ್ಚು. ಆ ಮೂಲಕ, ಸರಕು ಮತ್ತು ಸೇವಾ ತೆರಿಗೆ ಮತ್ತು ಮಾರಾಟ ತೆರಿಗೆ ಸಂಗ್ರಹದ ಸಾಧನೆಯಲ್ಲಿ ಕರ್ನಾಟಕವು ದೇಶಕ್ಕೆ ನಂಬರ್ ಒನ್ ಎನಿಸಿಕೊಂಡಿದೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಪ್ರಗತಿ ಪರಿಶೀಲನೆ ಗುರುವಾರ ನಡೆಸಿದ ಮುಖ್ಯಮಂತ್ರಿ, ರಾಜ್ಯದ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

‘ದೇಶದ ಒಟ್ಟಾರೆ ತೆರಿಗೆ ಸಂಗ್ರಹದಲ್ಲಿ ರಾಜ್ಯದ ಪಾಲು ಶೇ 9.4ರಷ್ಟಿದೆ. ಕಳೆದ ಬಾರಿಗಿಂತ ಈ ಬಾರಿ ರಾಜ್ಯದ ಪಾಲು ಹೆಚ್ಚಾಗಿದೆ’ ಎಂದು ಅಧಿಕಾರಿಗಳು ಮುಖ್ಯಮಂತ್ರಿ ಅವರಿಗೆ ವಿವರಿಸಿದರು

‘ದೇಶದ ಸರಾಸರಿ ತೆರಿಗೆ ಸಂಗ್ರಹ ಬೆಳವಣಿಗೆ ದರ ಶೇ 15ರಷ್ಟು ಮಾತ್ರ ಇದೆ. ಅದಕ್ಕೆ ಹೋಲಿಸಿದರೆ ತೆರಿಗೆ ಸಂಗ್ರಹ ವಿಚಾರದಲ್ಲಿ ಗಮನಾರ್ಹ ಸಾಧನೆ ಆಗಿದೆ. ಹಾಗೆಂದು, ಇಷ್ಟಕ್ಕೆ ಸಮಾಧಾನಪಟ್ಟುಕೊಳ್ಳದೆ ತೆರಿಗೆ ವಂಚನೆ ಪ್ರಕರಣಗಳನ್ನು ಹೆಚ್ಚೆಚ್ಚು ಪತ್ತೆ ಹಚ್ಚಿ ತೆರಿಗೆ ಸಂಗ್ರಹ ಗುರಿಯನ್ನು ದಾಟಿ ಸಾಧನೆ ಮಾಡುವ ಅವಕಾಶಗಳಿವೆ. ಅದನ್ನು ಸಾಧಿಸಿ ತೋರಿಸಬೇಕು’ ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಕಿವಿಮಾತು ಹೇಳಿದರು.

ಇಲಾಖೆಗೆ ಪ್ರಸಕ್ತ ಸಾಲಿನಲ್ಲಿ ಶೇ 24ರ ಬೆಳವಣಿಗೆ ಗುರಿ ನೀಡಲಾಗಿದೆ. ಈ ಗುರಿ ಮೀರಬೇಕು. ಕಾರ್ಯಚಟುವಟಿಕೆಯಲ್ಲಿ ಹಿಂದೆ ಉಳಿದವರು ಎಲ್ಲ ಪ್ರಯತ್ನಗಳನ್ನೂ ಮಾಡಬೇಕು. ಜಾಗೃತ ದಳದವರೂ ಸಹಕರಿಸಬೇಕು. ಎರಡು ತಿಂಗಳ ನಂತರ ಮತ್ತೆ ಪ್ರಗತಿ ಪರಿಶೀಲಿಸಲಾಗುವುದು. ಆ ವೇಳೆಗೆ ಇನ್ನಷ್ಟು ಪ್ರಗತಿಯ ವರದಿ ನೀಡಿ. ಮುಂದಿನ ಸಭೆ ವೇಳೆಗೆ ಒಟ್ಟಾರೆ ಪರಿಸ್ಥಿತಿ ಈಗಿರುವುದಕ್ಕಿಂತ ಹೆಚ್ವು ಆಶಾದಾಯಕ ಆಗಿರುವಂತೆ ಕ್ರಮ ವಹಿಸಬೇಕು ಎಂದು ಸಲಹೆ ನೀಡಿದರು.

‘ಸಾರಿಗೆ, ಗಣಿ, ನೋಂದಣಿ ಮತ್ತು ಮುದ್ರಾಂಕ ಇಲಾಖೆ ತೆರಿಗೆ ಸಂಗ್ರಹದಲ್ಲಿ ಆಶಾದಾಯಕ ಬೆಳವಣಿಗೆ ಕಾಣುತ್ತಿದೆ. ಆದರೆ ಗುರಿ ಮುಟ್ಟುವ ದಿಕ್ಕಿನಲ್ಲಿ ಸಮರ್ಪಕ ಕಾರ್ಯಯೋಜನೆಯನ್ನು ರೂಪಿಸಿಕೊಳ್ಳಿ’ ಎಂದು ಮೂರೂ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದರು.

ಶಕ್ತಿ ಯೋಜನೆಯಿಂದಾಗಿ ಪುರುಷ ಪ್ರಯಾಣಿಕರ ಸಂಖ್ಯೆಯೂ ಹೆಚ್ಚಾಗಿ ಯೋಜನೆ ಯಶಸ್ವಿ ಆಗಿದೆ ಎನ್ನುವ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದ ಮುಖ್ಯಮಂತ್ರಿ, ಮೆಚ್ಚುಗೆ ವ್ಯಕ್ತಪಡಿಸಿದರು.

ಹೊಸ ಬಸ್‌ಗಳ ಖರೀದಿ ಬಳಿಕ ಹೊಸ ಚಾಲಕರು ಮತ್ತು ನಿರ್ವಾಹಕರ ಅಗತ್ಯ ಬೀಳುತ್ತದೆ. ಅವರ ನೇಮಕದ ಕುರಿತು ಪ್ರತ್ಯೇಕ ಸಭೆ ನಡೆಸಲು ಸಭೆ ನಿರ್ಧರಿಸಿತು.

ಮುಖ್ಯಮಂತ್ರಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಆರ್ಥಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಆರ್ಥಿಕ ಇಲಾಖೆಯ ಕಾರ್ಯದರ್ಶಿಗಳಾದ ಪಿ.ಸಿ. ಜಾಫರ್, ಎಂ.ಟಿ. ರೇಜು, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾದ ಸಿ.ಶಿಖಾ ಇದ್ದರು.

‘ತೆರಿಗೆ ವಂಚನೆ ತಡೆಯಬೇಕು’

‘ತೆರಿಗೆ ವಂಚನೆ, ತೆರಿಗೆ ಸೋರಿಕೆ, ತೆರಿಗೆ ಕಳ್ಳತನ ಪ್ರಕರಣಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಿ ಕ್ರಮ ಕೈಗೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದರು.

‘ಕಟ್ಟುನಿಟ್ಟಿನ ಕ್ರಮಗಳನ್ನು ಇನ್ನಷ್ಟು ತೀವ್ರವಾಗಿ ಜಾರಿಗೊಳಿಸುವ ಮೂಲಕ ತೆರಿಗೆ ವಂಚನೆ ತಡೆಗಟ್ಟುವ ಕಡೆಗೆ ಹೆಚ್ಚು ಆಸಕ್ತಿ ಕೊಡಬೇಕು. ತೆರಿಗೆ ವಂಚನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.

‘ತೆರಿಗೆ ಕಳ್ಳತನ ತಡೆಯುವುದಕ್ಕಾಗಿ ಈಗಾಗಲೇ ಅಗತ್ಯ
ಸೌಲಭ್ಯಗಳನ್ನು ಒದಗಿಸಲಾಗಿದೆ. ನಿಮ್ಮ ಪ್ರಯತ್ನದಿಂದ ರಾಜ್ಯಕ್ಕೆ ಹೆಚ್ಚು ತೆರಿಗೆ ಬರಲು ಸಾಧ್ಯ. ಅನೇಕ ಭಾಗಗಳಲ್ಲಿ ಅನೇಕ ಉತ್ಪನ್ನಗಳಲ್ಲಿ ತೆರಿಗೆ ವಂಚನೆ ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಹೆಚ್ಚಿನ ಗಮನಹರಿಸಿ ತೆರಿಗೆ ಸಂಗ್ರಹಿಸಬೇಕು. ಹೆಚ್ಚು ತೆರಿಗೆ ಸಂಗ್ರಹ ಮಾಡಿದರೆ ಅಭಿವೃದ್ಧಿ ಕೆಲಸ ಮಾಡಲು ಹೆಚ್ಚು ಅನುಕೂಲವಾಗುತ್ತದೆ. ಸಾಮೂಹಿಕ ಜವಾಬ್ದಾರಿ ವಹಿಸಿಕೊಂಡು ಕೆಲಸ ಮಾಡಬೇಕು’ ಎಂದು ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಕಳ್ಳಬಟ್ಟಿಗೆ ಕಡಿವಾಣ ಅಗತ್ಯ: ಸಿ.ಎಂ

‘ಕಳ್ಳಬಟ್ಟಿಗೆ ಕಡಿವಾಣ ಹಾಕಿ, ಅಕ್ರಮ ಮದ್ಯ ನುಸುಳುವಿಕೆ ತಪ್ಪಿಸಿ, ಬಾಕಿ ತೆರಿಗೆ ವಸೂಲಿ ಮಾಡಿ ತೆರಿಗೆ ಸಂಗ್ರಹದಲ್ಲಿ ನಿಗದಿತ ಗುರಿ ಸಾಧಿಸಬೇಕು’ ಎಂದು ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ನಿರ್ದೇಶನ ನೀಡಿದರು.

ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ, ‘ಪ್ರಸಕ್ತ ವರ್ಷದ ರಾಜಸ್ವ ಸಂಗ್ರಹ ಗುರಿ ₹36 ಸಾವಿರ ಕೋಟಿ. ತೆರಿಗೆ ಸಂಗ್ರಹದ ಬೆಳವಣಿಗೆ ದರ ಶೇ 5.31ರಷ್ಟಿದೆ. ನಿಗದಿತ ಗುರಿ ಸಾಧನೆಗೆ ಎಲ್ಲರೂ ಶ್ರಮಿಸಬೇಕು’ ಎಂದರು.

‘ಗಡಿ ಭಾಗಗಳಲ್ಲಿ, ವಿಶೇಷವಾಗಿ ಗೋವಾ ರಾಜ್ಯದಿಂದ ಅಕ್ರಮ ಮದ್ಯ ಸಾಗಣೆ ಕುರಿತು ಜಾರಿ ದಳ ನಿಗಾ ವಹಿಸಬೇಕು. ಕಳ್ಳಬಟ್ಟಿ ಮದ್ಯ ತಯಾರಿಕೆ ಮತ್ತು ಮಾರಾಟವನ್ನು ಮಟ್ಟಹಾಕಬೇಕು. ಎಲ್ಲ ಕಡೆ ಕಟ್ಟೆಚ್ಚರ ವಹಿಸಬೇಕು. ಎಲ್ಲ ಉಪ ಆಯುಕ್ತರು ರಾಜಸ್ವ ಸಂಗ್ರಹ ಹೆಚ್ಚಳಕ್ಕೆ ಆದ್ಯತೆ ನೀಡಬೇಕು’ ಎಂದೂ ಆದೇಶಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.