ಬೆಂಗಳೂರು: ಮೂತ್ರಪಿಂಡ ಮತ್ತು ಮೂತ್ರಕೋಶ ಸಮಸ್ಯೆಗಳಿಗೆ ಚಿಕಿತ್ಸೆ ನೀಡುವಲ್ಲಿ ಮುಂಚೂಣಿಯಲ್ಲಿರುವ ನೆಫ್ರೊ–ಯುರಾಲಜಿ ಸಂಸ್ಥೆಗೆ ಪೂರ್ಣಾವಧಿ ನಿರ್ದೇಶರ ನೇಮಕಾತಿಗೆ ಮರು ಅಧಿಸೂಚನೆ ಹೊರಡಿಸುವಂತೆ ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನೆಫ್ರೊ–ಯುರಾಲಜಿ ಸಂಸ್ಥೆಯ ಆಡಳಿತ ಮಂಡಳಿ ಸಭೆ ಸೋಮವಾರ ನಡೆಯಿತು. ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ಕುಮಾರ್, ನಿರ್ದೇಶಕಿ ಸುಜಾತಾ ರಾಥೋಡ, ಮುಖ್ಯಮಂತ್ರಿ ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕಚಂದ್ರ ಅವರು ಸಭೆಯಲ್ಲಿದ್ದರು.

2013ರಿಂದ ಸಂಸ್ಥೆಗೆ ಪೂರ್ಣಾವಧಿ ನಿರ್ದೇಶಕರನ್ನು ನೇಮಕ ಮಾಡಿಲ್ಲ. ಮುಖ್ಯಮಂತ್ರಿಯೇ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷರಾಗಿದ್ದಾರೆ. ವೈದ್ಯಕೀಯ ಶಿಕ್ಷಣ ಸಚಿವರು ಉಪಾಧ್ಯಕ್ಷರಾಗಿದ್ದಾರೆ. ಆಡಳಿತ ಮಂಡಳಿಯ ಸಭೆಗಳಲ್ಲಿ ಸಂಸ್ಥೆಯ ನಿರ್ದೇಶಕ ಸ್ಥಾನದ ಬಗ್ಗೆ ಚರ್ಚೆ ನಡೆಯುತ್ತಿದ್ದರೂ ಸರ್ಕಾರ ಈವರೆಗೂ ನೇಮಕಾತಿ ನಡೆಸಿಲ್ಲ. ಡಾ.ಆರ್.ಕೇಶವಮೂರ್ತಿ ಅವರು ಪ್ರಭಾರ ಸ್ಥಾನದಲ್ಲಿದ್ದಾರೆ.

2021ರಲ್ಲಿ ನಿರ್ದೇಶಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಿದಾಗ ಐವರು ಅರ್ಜಿ ಸಲ್ಲಿಸಿದ್ದರು. ನಿರ್ದೇಶಕ ಹುದ್ದೆಯ ಅವಧಿ 4 ವರ್ಷಗಳು ಅಥವಾ ಸರ್ಕಾರದ ಮುಂದಿನ ಆದೇಶದವರೆಗೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿತ್ತು. ಆದರೆ, ಈವರೆಗೂ ನೇಮಕಾತಿ ನಡೆದಿಲ್ಲ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.