ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಪೆನ್ಡ್ರೈವ್ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರದಾಗಲಿ ಅಥವಾ ನನ್ನದಾಗಲಿ ಪಾತ್ರವಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಮೈಸೂರಿನ ವಿಮಾನನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಶುಕ್ರವಾರ ಮಾತನಾಡಿದ ಅವರು, ‘ಆ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ಎಸ್ಐಟಿಗೆ ವಹಿಸಿದ್ದೇವೆ. ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ. ಅವರು ಕಾನೂನು ಪ್ರಕಾರ ತನಿಖೆ ಮಾಡಿ ವರದಿ ಸಲ್ಲಿಸುತ್ತಾರೆ ಎಂಬ ನಂಬಿಕೆ ಇದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.