ಬೆಂಗಳೂರು: ಉತ್ತರಾಖಂಡದ ಶಾಸ್ತ್ರತಾಳ್‌ಗೆ ಚಾರಣಕ್ಕೆಂದು ತೆರಳಿ ಹವಾಮಾನ ವೈಪರೀತ್ಯದಿಂದಾಗಿ ಮೃತಪಟ್ಟಿರುವವರ ಮೃತದೇಹಗಳನ್ನು ಕುಟುಂಬದವರಿಗೆ ತಲುಪಿಸುವ ಮತ್ತು ರಕ್ಷಿಸಲ್ಪಟ್ಟಿರುವ ಉಳಿದ ಚಾರಣಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡೆಹ್ರಾಡೋನ್‌ನಲ್ಲಿರುವ ಕಂದಾಯ ಸಚಿವ ಕೃಷ್ಣಬೈರೇಗೌಡ ಮತ್ತು ರಕ್ಷಿಸಲ್ಪಟ್ಟ ಚಾರಣಿಗರ ಜೊತೆ ದೂರವಾಣಿ ಮೂಲಕ ಮಾತನಾಡಿದರು.

‘ಮೃತರ ಸಂಖ್ಯೆ 9ಕ್ಕೆ ಏರಿದ ಸಂಗತಿ ತಿಳಿದು ಬಹಳ ನೋವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ರಕ್ಷಿಸಲ್ಪಟ್ಟಿರುವ ಎಲ್ಲರನ್ನೂ ಯಾವುದೇ ಅಡಚಣೆ ಆಗದಂತೆ ಸುರಕ್ಷಿತವಾಗಿ ಮನೆಗಳಿಗೆ ಸೇರಿಸಬೇಕು. ಮೃತ ದೇಹಗಳನ್ನು ಕುಟುಂಬದವರಿಗೆ ತಲುಪಿಸುವ ನಿಟ್ಟಿನಲ್ಲೂ ಅಗತ್ಯವಾದ ಎಲ್ಲಾ ಪ್ರಕ್ರಿಯೆಗಳನ್ನು ತುರ್ತಾಗಿ ನಿರ್ವಹಿಸಬೇಕು ಎನ್ನುವ ಸೂಚನೆಗಳನ್ನು ಸಚಿವ ಕೃಷ್ಣಬೈರೇಗೌಡರಿಗೆ ನೀಡಿದ್ದೇನೆ’ ಎಂದು ಎಕ್ಸ್‌ನಲ್ಲಿ ಸಿದ್ದರಾಮಯ್ಯ ತಿಳಿಸಿದ್ದಾರೆ.

‘ರಕ್ಷಿಸಲ್ಪಟ್ಟ ಸುರಕ್ಷಿತ ನೆಲೆಗೆ ಕರೆತರಲಾಗಿರುವ ಚಾರಣಿಗರ ಜೊತೆಗೂ ಮಾತನಾಡಿದ ಮುಖ್ಯಮಂತ್ರಿಗಳು, ಬಾಕಿ ಉಳಿದಿರುವ ಪ್ರತಿಯೊಬ್ಬರನ್ನೂ ಸುರಕ್ಷಿತವಾಗಿ ಕಾಪಾಡಿ ಕರೆತರುವ ಬಗ್ಗೆ ಸರ್ಕಾರಗಳ ಮಟ್ಟದಲ್ಲಿ ಸಕಲ ಪ್ರಯತ್ನಗಳೂ ನಡೆಯುತ್ತಿವೆ’ ಎಂದು ಭರವಸೆ ನೀಡಿದ್ದಾರೆ.

‘ಈಗಾಗಲೇ ರಕ್ಷಣಾ ಕಾರ್ಯಾಚರಣೆ ಮೂಲಕ ರಕ್ಷಿಸಲ್ಪಟ್ಟವರನ್ನು ಸುರಕ್ಷಿತ ಪ್ರದೇಶಕ್ಕೆ ವಾಪಸು ಕರೆತರಲಾಗಿದ್ದು, ಇನ್ನೂ ಕೆಲವು ಚಾರಣಿಗರ ರಕ್ಷಣೆ ಆಗಬೇಕಿದೆ. ಪ್ರತಿಕೂಲ ಹವಾಮಾನವು ರಕ್ಷಣಾ ಕಾರ್ಯಕ್ಕೆ ತೀವ್ರ ಅಡಚಣೆ ಉಂಟುಮಾಡುತ್ತಿದ್ದು, ಎಲ್ಲರನ್ನೂ ಸುರಕ್ಷಿತವಾಗಿ ಕರೆತರಲು ನಮ್ಮ ಸರ್ಕಾರವು ಶಕ್ತಿಮೀರಿ ಪ್ರಯತ್ನಿಸುತ್ತಿದೆ’ ಎಂದು ತಿಳಿಸಿದ್ದಾರೆ.
.ಉತ್ತರಾಖಂಡ | ಹವಾಮಾನ ವೈಪರೀತ್ಯ: ಕರ್ನಾಟಕದ ನಾಲ್ವರು ಚಾರಣಿಗರ ಸಾವು.ಉತ್ತರಾಖಂಡ ಚಾರಣ: ರಾಜ್ಯದ ಐವರ ಸಾವು, ನಾಲ್ವರು ಕಣ್ಮರೆ.ರಾಜ್ಯದ ಚಾರಣಿಗರ ರಕ್ಷಣೆಗಾಗಿ ಉತ್ತರಾಖಂಡಕ್ಕೆ ತೆರಳಿದ ಸಚಿವ ಕೃಷ್ಣ ಬೈರೇಗೌಡ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.