ಬೆಂಗಳೂರು: 'ಮುಡಾದಲ್ಲಿ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ ಅವರು ಅಕ್ರಮವಾಗಿ 14 ನಿವೇಶನ ಪಡೆದಿದ್ದಾರೆ' ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ತಮ್ಮ ವಿರುದ್ಧ ತನಿಖೆಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಅವರು ಸೋಮವಾರ ಬೆಳಿಗ್ಗೆ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.

ಸಿದ್ದರಾಮಯ್ಯ ಪರ ವಕಾಲತ್ತು ವಹಿಸಿರುವ ಈ ಅರ್ಜಿಯನ್ನು ನ್ಯಾಯಮೂರ್ತಿ ಹೇಮಂತ ಚಂದನಗೌಡರ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಮೆಮೊ ಮೂಲಕ ಸಲ್ಲಿಸಿದರು.

ಸಿದ್ದರಾಮಯ್ಯ ಪರ ಹಿರಿಯ ವಕೀಲ ರವಿವರ್ಮ ಕುಮಾರ್, ಅರ್ಜಿಯ ತುರ್ತು ವಿಚಾರಣೆ ನಡೆಸುವಂತೆ ಕೋರಿದರು.

ಮೆಮೊ ಸ್ವೀಕರಿಸಿರುವ ನ್ಯಾಯಪೀಠ ಅರ್ಜಿಯನ್ನು ಮಧ್ಯಾಹ್ನ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ. ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು ಸಲ್ಲಿಸಿರುವ ಮೂವರು ಫಿರ್ಯಾದುದಾರರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.
.ಮುಡಾ ಹಗರಣ: ‘ಕೈ’–‘ಕಮಲ’ ಕಾಳಗ ಬಿರುಸು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.