ಬೆಂಗಳೂರು: ಸಾಹಿತಿ ಎಂ.ಎಂ. ಕಲಬುರ್ಗಿ ಮತ್ತು ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರಣೆಗೆ ತ್ವರಿತ ನ್ಯಾಯಾಲಯ ರಚಿಸಿ, ಪೂರ್ಣಾವಧಿ ನ್ಯಾಯಾಧೀಶರನ್ನು ನೇಮಕ ಮಾಡಲು ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2017ರ ಸೆಪ್ಟೆಂಬರ್ 5ರಂದು ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಈ ಸಂಬಂಧ ವಿಶೇಷ ತನಿಖಾ ದಳ ರಚಿಸಲಾಗಿದೆ. ಈವರೆಗೆ 18 ಮಂದಿ ಆರೋಪಿಗಳನ್ನು ಬಂಧಿಸಿದ್ದು, 1200 ಪುರಾವೆಗಳು ಹಾಗೂ 500ಕ್ಕೂ ಹೆಚ್ಚು ಸಾಕ್ಷ್ಯಗಳನ್ನು ಒಳಗೊಂಡ ಚಾರ್ಜ್ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ನ್ಯಾಯಾಲಯದಲ್ಲಿ 2022ರ ಜುಲೈನಿಂದ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ವಿಚಾರಣೆ ನಿಧಾನಗತಿಯಲ್ಲಿ ಸಾಗುತ್ತಿದೆ. ಈ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚಿಸಿ, ಪೂರ್ಣಾವಧಿ ನ್ಯಾಯಾಧೀಶರನ್ನು ನೇಮಕ ಮಾಡುವಂತೆ ಮೃತರ ಸಹೋದರಿ ಕವಿತಾ ಲಂಕೇಶ್ ಮನವಿ ಮಾಡಿದ್ದರು. ಮೃತರ ಕುಟುಂಬಸ್ಥರ ಮನವಿ ಮೇರೆಗೆ ಸಿಎಂ ಈ ನಿರ್ಧಾರ ಕೈಗೊಂಡಿದ್ದಾರೆ.

2015ರ ಆಗಸ್ಟ್ 30ರಂದು ಧಾರವಾಡದ ನಿವಾಸದಲ್ಲಿ ಎಂ.ಎಂ. ಕಲಬುರ್ಗಿ ಅವರನ್ನು ಹತ್ಯೆ ಮಾಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.