ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಸಂಕ್ರಾಂತಿಯ ಬಳಿಕವೇ ನಡೆಯುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೂತನ ಶಾಸಕರಿಗೆ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರದ ಸಂದರ್ಭದಲ್ಲಿ ಸಚಿವಾಕಾಂಕ್ಷಿ ಶಾಸಕರಿಗೆ ಈ ಮಾಹಿತಿ ನೀಡಿದರು ಎಂದು ಮೂಲಗಳು ಹೇಳಿವೆ.

‘ಪೌರತ್ವ (ತಿದ್ದುಪಡಿ) ಕಾಯ್ದೆಯಿಂದ ದೇಶಾದಾದ್ಯಂತ ಪ್ರತಿಭಟನೆ ನಡೆಯುತ್ತಿರುವುದೂ ಸೇರಿದಂತೆ ಹಲವು ಕಾರಣಗಳಿಗೆ ಈ ತಿಂಗಳ ಕೊನೆಯಲ್ಲಿ ದೆಹಲಿಗೆ ಬರುವಂತೆ ವರಿಷ್ಠರು ಸೂಚನೆ ನೀಡಿದ್ದಾರೆ. ವರಿಷ್ಠರ ಅನುಮತಿ ಪಡೆಯದೆ ಯಾವುದೇ ಹೆಜ್ಜೆ ಇಡುವುದಿಲ್ಲ. ಭರವಸೆ ನೀಡಿರುವಂತೆ ಎಲ್ಲರಿಗೂ ಸಚಿವ ಸ್ಥಾನ ನೀಡಲಾಗುವುದು’ ಎಂದರು.

‘ಸಂಪುಟ ವಿಸ್ತರಣೆ ತಡವಾಗಿರುವುದರಿಂದ ಯಾವುದೇ ವದಂತಿಗಳಿಗೂ ಕಿವಿಗೊಡಬೇಡಿ. ನಿಜಾಂಶ ನಿಮಗೂ ಗೊತ್ತಿದೆ, ಆದ್ದರಿಂದ ತಾಳ್ಮೆಯಿಂದ ಇರಿ’ ಎಂದು ಯಡಿಯೂರಪ್ಪ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.