ದಾವಣಗೆರೆ: ಉಪ ಚುನಾವಣೆಯಲ್ಲಿ 15 ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆಲವು ಸಾಧಿಸುತ್ತಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಖಾಸಗಿ ಕಾರ್ಯಕ್ರಮಕ್ಕೆ ದಾವಣಗೆರೆಗೆ ಭೇಟಿ ನೀಡಿದ್ದ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಅವರು ಮಾತನಾಡಿದರು.

‘ಬಿಜೆಪಿ ಅಭ್ಯರ್ಥಿಗಳಿಗೆ ಜನರ ಆರ್ಶಿವಾದವಿದ್ದು, ಗೆಲುವು ಸಾಧಿಸುವುದು ನಿಶ್ವಿತ. ಉಪ ಚುನಾವಣೆ ಬಳಿಕ ಸಿಎಂ ಮನೆಗೆ ಹೋಗುತ್ತಾರೆ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಬಿ.ಎಸ್.ಯಡಿಯೂರಪ್ಪ ಡಿಸೆಂಬರ್ ಒಂಬತ್ತರ ನಂತರ ಯಾರು ಮನೆಗೆ ಹೋಗುತ್ತಾರೆ ಎಂದು ಜನರೇ ನಿರ್ಧಾರ ಮಾಡುತ್ತಾರೆ. ಕಾಂಗ್ರೆಸ್ನವರೋ ಅಥವಾ ಬಿಜೆಪಿಯವರೋ ಎಂಬುದು ಗೊತ್ತಾಗುತ್ತದೆ’ ಎಂದು ಹೇಳಿದರು.

ಉಪಚುನಾವಣೆಯ ನಂತರ ಸ್ಥಾನಗಳ ಕೊರತೆ ಬಂದರೆ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಜೆಡಿಎಸ್ನ ಜೊತೆ ಹೊಂದಾಣಿಕೆ ಮಾಡಿಕೊಳ್ಳುವ ಪ್ರಶ್ನೆಯೇ ಬರೊಲ್ಲ’ ಎಂದು ಹೇಳಿದ ಅವರು, ಅನರ್ಹ ಶಾಸಕರು ಎಂದು ಯಾರೂ ಹೇಳಬಾರದು. ಏಕೆಂದರೆ ಇದನ್ನು ಸುಪ್ರೀಂ ಕೋರ್ಟ್ ಇದನ್ನು ಹೇಳಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.