ಬೆಂಗಳೂರು: ಸಮನ್ವಯ, ಸಹಕಾರ ಮತ್ತು ಸಹಯೋಗದಿಂದ ಮಾತ್ರ ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಪರಿಣಾಮಗಳನ್ನು ತಗ್ಗಿಸಲು ಸಾಧ್ಯ ಎಂದು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಪ್ರತಿಪಾದಿಸಿದ್ದಾರೆ.

ಪರಿಸರ ಶಿಕ್ಷಣ ಕೇಂದ್ರ (ಸಿಇಇ) ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (ಎಂಪ್ರಿ) ಮತ್ತು ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಜರ್ಮನ್ ಫೌಂಡೇಶನ್ ಹ್ಯಾನ್ಸ್ ಸೀಡೆಲ್ ಸ್ಟಿಫ್ಟಂಗ್ ಸಹಯೋಗದಲ್ಲಿ ಆಯೋಜಿಸಲಾಗಿರುವ 2 ದಿನಗಳ ರಾಜ್ಯ ಹವಾಮಾನ ಕ್ರಮ ಮತ್ತು ಮೇಲ್ವಿಚಾರಣೆ ಕುರಿತ ನೀತಿ ಸಂವಾದಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆ ಇಂದು ವಿಶ್ವಕ್ಕೇ ಸವಾಲಾಗಿದ್ದು, ಇದರ ಪರಿಣಾಮ ಎದುರಿಸಲು ಮತ್ತು ಪರಿಸರದ ಉಳಿವಿಗಾಗಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ನಡುವೆ ಸಮನ್ವಯ ಸಾಧಿಸಲಾಗುವುದು ಎಂದು ತಿಳಿಸಿದರು.

ಎಲ್ಲಾ ಖಂಡಗಳ ನೈಸರ್ಗಿಕ ಮತ್ತು ಮಾನವನ ಜೀವನದ ಮೇಲೆ ಹವಾಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನ ಏರಿಕೆಯ ಪರಿಣಾಮಗಳು ಬೀರುತ್ತಿವೆ. ಬಿಸಿಗಾಳಿ, ಅತಿವೃಷ್ಟಿ, ಅನಾವೃಷ್ಟಿ, ಚಂಡಮಾರುತ ಮತ್ತು ಕಾಡ್ಗಿಚ್ಚಿನಂತಹ ವಿಕೋಪಗಳು ಸಂಭವಿಸುತ್ತಿವೆ. ಇವುಗಳನ್ನು ತಗ್ಗಿಸುವ ಮಾರ್ಗೋಪಾಯಗಳನ್ನು ಸಂಶೋಧಿಸುವುದು ಇಂದಿನ ಅಗತ್ಯವಾಗಿದೆ. ಜೊತೆಗೆ ಎಲ್ಲ ಸಂಶೋಧನೆಗಳ ಫಲ ಶ್ರೀಸಾಮಾನ್ಯನಿಗೆ ಲಭಿಸಿದಾಗ ಮಾತ್ರ ಅದು ಯಶಸ್ವಿಯಾಗುತ್ತದೆ ಎಂದು ಹೇಳಿದರು.

ಭಾರತ ಸರ್ಕಾರ ಜೂನ್ 2008 ರಲ್ಲಿ ಹವಾಮಾನ ಬದಲಾವಣೆಯ ರಾಷ್ಟ್ರೀಯ ಕ್ರಿಯಾ ಯೋಜನೆ ಯನ್ನು ಬಿಡುಗಡೆ ಮಾಡಿತ್ತು. ಹವಾಮಾನ "ಸಹ-ಪ್ರಯೋಜನಗಳೊಂದಿಗೆ" ಸುಸ್ಥಿರ ಅಭಿವೃದ್ಧಿ ಮತ್ತು ಬೆಳವಣಿಗೆಯನ್ನು ಉತ್ತೇಜಿಸಲು ಸೂಕ್ತವಾದ ದೀರ್ಘಕಾಲೀನ ಕ್ರಮಗಳಿಗಾಗಿ ನೀತಿಗಳನ್ನು ರೂಪಿಸುವುದು ಅಗತ್ಯವಾಗಿದೆ ಎಂದು ಈಶ್ವರ ಖಂಡ್ರೆ ಹೇಳಿದರು.

ಹವಾಮಾನ ಸಂಬಂಧಿತ ವಿಕೋಪಗಳಿಂದ ಕೃಷಿ, ತೋಟಗಾರಿಕೆ, ಅರಣ್ಯ, ಪಶುಸಂಗೋಪನೆ ಮತ್ತು ಮೀನುಗಾರಿಕೆ, ಆರೋಗ್ಯ ಮುಂತಾದ ಕ್ಷೇತ್ರಗಳು ಬಾಧಿತವಾಗಿವೆ. ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು, ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ನಿಗದಿಪಡಿಸಿದ ಮಾರ್ಗಸೂಚಿಗಳನ್ವಯ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (ಎಂಪ್ರಿ) ಹವಾಮಾನ ಬದಲಾವಣೆಯ ಕರ್ನಾಟಕ ರಾಜ್ಯ ಕ್ರಿಯಾ ಯೋಜನೆ -2 (ಕೆಎಸ್ಎಪಿಸಿಸಿ ವಿ.2) ಅನ್ನು ಸಿದ್ಧಪಡಿಸಿದೆ. ಇದಕ್ಕೆ ಭಾರತ ಸರ್ಕಾರದ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಹವಾಮಾನ ಬದಲಾವಣೆಯ ರಾಷ್ಟ್ರೀಯ ಪರಾಮರ್ಶನಾ ಸಮಿತಿ ಅನುಮೋದನೆ ನೀಡಿದೆ ಎಂದು ತಿಳಿಸಿದರು.

ಜಾಗತಿಕ ತಾಪಮಾನ ಏರಿಕೆಯಿಂದ ಪರಿಸರ, ಜನ, ಜಾನುವಾರು, ಕೃಷಿ, ಮೀನುಗಾರಿಕೆ ಮತ್ತು ಮಾನವ ಆರೋಗ್ಯದ ಮೇಲೆ ಆಗುವ ದುಷ್ಪರಿಣಾಮಗಳನ್ನು ತಗ್ಗಿಸಲು ಬಾಧ್ಯಸ್ಥರೊಂದಿಗೆ ಸಹಯೋಗ, ಸಮನ್ವಯ ಮತ್ತು ಸಹಕಾರ ರೂಪಿಸುವುದು ಅತ್ಯಗತ್ಯ ಎಂದು ಈಶ್ವರ ಖಂಡ್ರೆ ಪ್ರತಿಪಾದಿಸಿದರು.

ಹವಾಮಾನ ಬದಲಾವಣೆಯ ಕರ್ನಾಟಕ ರಾಜ್ಯ ಕ್ರಿಯಾ ಯೋಜನೆ -2 ಅನುಷ್ಠಾನದ ಪರಿಣಾಮಕಾರಿ ಮೇಲ್ವಿಚಾರಣೆಗೆ ಅಗತ್ಯ ಪರಿಣತಿಯೊಂದಿಗೆ ಅಧಿಕಾರಿಗಳನ್ನು ಸಜ್ಜುಗೊಳಿಸಲು ಆಯ್ದ ಜಿಲ್ಲಾ ಮಟ್ಟದ ಸರ್ಕಾರಿ ಅಧಿಕಾರಿಗಳಿಗೆ ತರಬೇತಿ ನೀಡಲಾಗಿದೆ ಎಂದೂ ತಿಳಿಸಿದರು.

ಭಾರತದ 36 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪೈಕಿ 34 ರಾಜ್ಯಗಳು ಈಗಾಗಲೇ ಹವಾಮಾನ ಬದಲಾವಣೆಯ ಬಗ್ಗೆ ತಮ್ಮ ರಾಜ್ಯ ಕ್ರಿಯಾ ಯೋಜನೆಗಳನ್ನು ಅಭಿವೃದ್ಧಿಪಡಿಸಿವೆ ಎಂಬುದು ಸಂತಸದ ವಿಷಯ ಎಂದರು.

2 ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ತಜ್ಞರು ಚಿಂತನ ಮಂಥನದಿಂದ ಹೊರಹೊಮ್ಮುವ ಉತ್ತಮ ಅಂಶಗಳು ರಾಜ್ಯದ ಪರಿಸರ ಸಂರಕ್ಷಣೆಗೆ ದಾರಿದೀಪವಾಗಲಿ ಎಂದು ಆಶಿಸಿದರು.

ಕಾರ್ಯಕ್ರಮದಲ್ಲಿ ಪರಿಸರ ಶಿಕ್ಷಣ ಕೇಂದ್ರದ ರಜನಿ, ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆಯ ಮಹಾ ನಿರ್ದೇಶಕ ಬಿ.ಪಿ. ರವಿ, ಮತ್ತು ಜರ್ಮನ್ ಫೌಂಡೇಶನ್ ಹ್ಯಾನ್ಸ್ ಸೀಡೆಲ್ ಸ್ಟಿಫ್ಟಂಗ್ ನ ಸಂದೀಪ್ ದುಬೆ ಮತ್ತಿತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.