ಬೆಂಗಳೂರು: ರಾಜ್ಯ ಸರ್ಕಾರಿ ಸ್ವಾಮ್ಯದ ನಾಲ್ಕು ಸಾರಿಗೆ ಸಂಸ್ಥೆಗಳ ಪುನರ್ ವಿನ್ಯಾಸ, ಸುಧಾರಣೆ ಮತ್ತು ಆರ್ಥಿಕ ಸ್ವಾವಲಂಬನೆ ತರುವ ಕುರಿತು ಅಧ್ಯಯನ ನಡೆಸಲು ನಿವೃತ್ತ ಐಎಎಸ್ ಅಧಿಕಾರಿ ಎಂ.ಆರ್. ಶ್ರೀನಿವಾಸಮೂರ್ತಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಸಾರಿಗೆ ಇಲಾಖೆ ಮಂಗಳವಾರ ಆದೇಶ ಹೊರಡಿಸಲಾಗಿದೆ.

ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ (KSRTC), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC), ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NEKRTC) ಮತ್ತು ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಗಳಲ್ಲಿ (NWKRTC)ಸುಧಾರಣೆ ತರುವ ಕುರಿತು ಸಮಿತಿ ಅಧ್ಯಯನ ನಡೆಸಿ, ಮೂರು ತಿಂಗಳೊಳಗೆ ವರದಿ ಸಲ್ಲಿಸಬೇಕು.

ನಾಲ್ಕೂ ಸಂಸ್ಥೆಗಳ ಪುನರ್ ವಿನ್ಯಾಸ, ಜಮೀನು, ಕಟ್ಟಡ ಸೇರಿದಂತೆ ಸ್ಥಿರಾಸ್ತಿಗಳನ್ನು ವಿಲೇವಾರಿ ಮಾಡಿ ಆರ್ಥಿಕ ಸಂಪನ್ಮೂಲ ಕ್ರೋಡೀಕರಿಸುವುದು ಮತ್ತು ಸಾರಿಗೆ ಕ್ಷೇತ್ರದ ಕಾರ್ಯಕ್ಷಮತೆ ಹೆಚ್ಚಿಸುವ ಕುರಿತು ಸಮಿತಿ ಅಧ್ಯಯನ ನಡೆಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.