ಬೆಂಗಳೂರು: ವನ್ಯಜೀವಿ ವಸ್ತುಗಳ ಸಂಗ್ರಹ, ಮಾರಾಟದ ವಿರುದ್ಧ ಇನ್ನಷ್ಟು ಕಠಿಣ ನಿಯಮಗಳನ್ನು ರೂಪಿಸಲು ವನ್ಯಜೀವಿ ವಿಭಾಗದ ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ.

ಸಮಿತಿಯಲ್ಲಿ ಬೆಂಗಳೂರು, ಹಾಸನ, ಚಿಕ್ಕಮಗಳೂರು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು, ಬೆಂಗಳೂರು ನಗರ, ತುಮಕೂರು, ಕೊಪ್ಪ ಹಾಗೂ ಶಿವಮೊಗ್ಗ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಸದಸ್ಯರಾಗಿರುತ್ತಾರೆ.

ಹುಲಿ ಉಗುರು, ಹಲ್ಲು, ಚರ್ಮ ಸೇರಿದಂತೆ ಯಾವುದೇ ವನ್ಯಜೀವಿಯ ಅಂಗಾಂಗದಿಂದ ಮಾಡಿದ ವಸ್ತುಗಳ ಸಂಗ್ರಹ ಹಾಗೂ ಮಾರಾಟ ನಿಷೇಧಿಸಲಾಗಿದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ–1972 ರ ಅಡಿಯಲ್ಲಿ ನಿಯಮಗಳನ್ನು ಜಾರಿಗೆ ತರಲಾಗಿದೆ. ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ. ಕಾಯ್ದೆ ಜಾರಿಯ ನಂತರ ದಾಖಲಾದ ಪ್ರಕರಣಗಳು, ಶಿಕ್ಷೆಯ ಪ್ರಮಾಣ, ವಿಚಾರಣೆ ಹಂತದಲ್ಲಿರುವ ಪ್ರಕರಣಗಳ ಸ್ಥಿತಿಗತಿ, ಮುಂದಿನ ದಿನಗಳಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಸಮಿತಿ ಒಂದು ವಾರದ ಒಳಗೆ ವರದಿ ಸಲ್ಲಿಸಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಮಾಹಿತಿ ನೀಡಿದರು.

ಕಾನೂನಿನ ಮುಂದೆ ಎಲ್ಲರೂ ಸಮಾನರು. ಗಣ್ಯರಿಗೂ ವಿನಾಯಿತಿ ಇಲ್ಲ. ದೂರು ಬಂದರೆ ಪರಿಶೀಲಿಸಿ, ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.