ಬೆಂಗಳೂರು: ವಿವಿಧ ಕೋರ್ಸ್‌ಗಳಿಗೆ ಸೇರಿದ 97 ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳು ಕಳವಾಗಿರುವ ಕುರಿತು ಪರಿಶೀಲಿಸಲು ಬೆಂಗಳೂರು ವಿಶ್ವವಿದ್ಯಾಲಯ ಸಮಿತಿ ರಚಿಸಿದೆ.

ಬೆಂಗಳೂರು ವಿಶ್ವವಿದ್ಯಾಲಯ ಹಾಗೂ ವಿಶ್ವವಿದ್ಯಾಲಯದ ಸಂಯೋಜಿತ ಕಾಲೇಜುಗಳಲ್ಲಿ 2013ರಿಂದ 2023ರ ಅವಧಿಯಲ್ಲಿ ಪರೀಕ್ಷೆ ತೆಗೆದುಕೊಂಡಿದ್ದ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳು ನಿಗೂಢವಾಗಿ ನಾಪತ್ತೆಯಾಗಿದ್ದವು. ಹಾಗಾಗಿ, 97 ವಿದ್ಯಾರ್ಥಿಗಳಿಗೆ ಫಲಿತಾಂಶ ಹಾಗೂ ಪದವಿ ಪ್ರಮಾಣ ಪತ್ರ ಪಡೆಯಲು ಸಾಧ್ಯವಾಗಿರಲಿಲ್ಲ.

ಫಲಿತಾಂಶ ಹಾಗೂ ಪ್ರಮಾಣ ಪತ್ರ ಪಡೆಯಲು ವಿದ್ಯಾರ್ಥಿಗಳು ಅಲೆದಾಡುತ್ತಿರುವ ವಿಷಯ ಈಚೆಗೆ ನಡೆದ ಸಿಂಡಿಕೇಟ್ ಸಭೆಯಲ್ಲೂ ಚರ್ಚೆಯಾಗಿತ್ತು. ಸಮಸ್ಯೆ ಬಗೆಹರಿಸಿ, ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ದೊರಕಿಸಲು ಸಮಿತಿ ರಚಿಸುವಂತೆ ಸಿಂಡಿಕೇಟ್ ಸಲಹೆ ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.