ಬೆಂಗಳೂರು: ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ಚರ್ಮದ ಬಣ್ಣದ ಆಧಾರದ ಮೇಲೆ ದಕ್ಷಿಣ ಭಾರತೀಯರನ್ನು ಆಫ್ರಿಕಾದವರಿಗೆ ಹೋಲಿಸಿರುವುದು ಜನಾಂಗೀಯ ನಿಂದನೆ. ಇಂತಹ ಹೋಲಿಕೆಯನ್ನು ಯಾರೂ ಒಪ್ಪಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.

'ಎಕ್ಸ್' ಮೂಲಕ ಪಿತ್ರೋಡಾ ಹೇಳಿಕೆಯನ್ನು ಖಂಡಿಸಿರುವ ಅವರು, ಈ ಹೇಳಿಕೆ ನೋಡಿದರೆ ನೆಹರೂ–ಗಾಂಧಿ ಕುಟುಂಬದ ವಸಾಹತು ಮನಸ್ಥಿತಿಯನ್ನು ಬಿಂಬಿಸುತ್ತದೆ.

ಕಾಂಗ್ರೆಸ್ ಪಕ್ಷದ ಇಂತಹ ವಿಭಜಕ ನೀತಿಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ ಏನು? ಕನ್ನಡದ ಹೆಮ್ಮೆಯ ಬಗ್ಗೆ ಮಾತನಾಡುವ ಇವರು ಈಗ ಏನು ಹೇಳುತ್ತಾರೆ ಎಂದು ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.