ಸಿದ್ದಾಪುರ (ಕೊಡಗು ಜಿಲ್ಲೆ): ಆಗಸ್ಟ್ನಲ್ಲಿ ಉಂಟಾಗಿದ್ದ ಕಾವೇರಿ ಪ್ರವಾಹದಲ್ಲಿ ಮನೆ ಕಳೆದುಕೊಂಡಿದ್ದ ಸಂತ್ರಸ್ತರೊಬ್ಬರು, ಮನನೊಂದು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನೆಲ್ಯಹುದಿಕೇರಿ ಗ್ರಾಮ ವ್ಯಾಪ್ತಿಯ ಬೆಟ್ಟದಕಾಡು ನಿವಾಸಿ ಶಂಕರ್ ದಾಸ್ (65) ಆತ್ಮಹತ್ಯೆ ಮಾಡಿಕೊಂಡ ಸಂತ್ರಸ್ತ.

ಪ್ರವಾಹದಲ್ಲಿ ಮನೆ ಸಂಪೂರ್ಣ ಕುಸಿದು ಬಿದ್ದಿತ್ತು. ಇದರಿಂದ ಶಂಕರ್ ದಾಸ್ ತೀವ್ರ ನೋವಿನಲ್ಲಿದ್ದರು.
ಸರ್ಕಾರದ ನೆರವು ಸಿಗಬಹುದೆಂದು ಇಷ್ಟು ದಿವಸ ಕಾದಿದ್ದರು. ಇದುವರೆಗೂ ಯಾವುದೇ ಪರಿಹಾರ ದೊರಕದ ಕಾರಣ, ಭಾನುವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಕಾವೇರಿ ನದಿ ಪಕ್ಕದಲ್ಲಿ ಮನೆ ನಿರ್ಮಿಸಿಕೊಂಡು ವಾಸವಿದ್ದರು. ಕಾಫಿ ಎಸ್ಟೇಟ್ನಲ್ಲಿ ಶಂಕರ್ ದಾಸ್ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಮನೆ ಕಳೆದುಕೊಂಡ ಬಳಿಕ ನೊಂದುಕೊಂಡಿದ್ದರು.

ಶಂಕರ್ ದಾಸ್ ಪುತ್ರ, ಸಿದ್ದಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.