ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ಮತದಾರರಿಗೆ ನೀಡಿದ್ದ ಗ್ಯಾರಂಟಿಗಳನ್ನು ತ್ವರಿತವಾಗಿ ಅನುಷ್ಠಾನಕ್ಕೆ ತರುವ ಉದ್ದೇಶದಿಂದ ಸಂಪುಟದಲ್ಲಿನ ಎಲ್ಲ ಸ್ಥಾನಗಳನ್ನು ಭರ್ತಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸಂಪುಟ ವಿಸ್ತರಣೆ ಬಳಿಕ ವಿಧಾನಸೌಧದಲ್ಲಿ ಸಂಪುಟ ಸಭೆ ನಡೆಸಿದರು. ಬಳಿಕ ಪತ್ರಕರ್ತರ ಜತೆ ಮಾತನಾಡಿದ ಅವರು, ಗ್ಯಾರಂಟಿಗಳನ್ನು ಜಾರಿ ಮಾಡುವ ಕುರಿತು ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಇದನ್ನೂ ಓದಿ: ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ಪಟ್ಟಿ

ಇದು ಹೊಸಬರು ಮತ್ತು ಹಳಬರ ಮಿಶ್ರಣದ ಸಂಪುಟ. ಮೊದಲ ಬಾರಿ ಗೆದ್ದು ಬಂದಿರುವ ಯಾರನ್ನೂ ಸಂಪುಟಕ್ಕೆ ಸೇರಿಸಿಕೊಂಡಿಲ್ಲ. ಹೀಗಾಗಿ ಕೆಲವು ಜಿಲ್ಲೆಗಳಿಗೆ ಸಂಪುಟದಲ್ಲಿ ಪ್ರಾತಿನಿಧ್ಯ ಸಿಕ್ಕಿಲ್ಲ ಎಂದು ಹೇಳಿದರು.

ಸಂಪುಟ ವಿಸ್ತರಣೆಯಂತಹ ಸಂದರ್ಭದಲ್ಲಿ ಸಮಾಧಾನ, ಅಸಮಾಧಾನ ಸಹಜ. ಎಲ್ಲವೂ ಸರಿಹೋಗುತ್ತದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.