ನವದೆಹಲಿ: ಆಹಾರ ಹಾಗೂ ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಅವರು ರೈಲ್ವೆ ಖಾತೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರನ್ನು ನವದೆಹಲಿಯಲ್ಲಿ ಸೋಮವಾರ ಭೇಟಿ ಮಾಡಿ ಕರ್ನಾಟಕದ ರೈಲ್ವೆ ಯೋಜನೆಗಳನ್ನು ಪೂರ್ಣಗೊಳಿಸಬೇಕು ಎಂದು ಮನವಿ ಮಾಡಿದರು.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ವೈಟ್‌ಫೀಲ್ಡ್–ಕೋಲಾರ, ಕಡಪ–ಕೆಜಿಎಫ್, ಚಿಕ್ಕಮಗಳೂರು–ಸಕಲೇಶಪುರ, ಬೆಂಗಳೂರು–ಕೊಳ್ಳೇಗಾಲ, ಚಿಕ್ಕಬಳ್ಳಾಪುರ–ಪುಟ್ಟಪರ್ತಿ, ಚಿಕ್ಕಬಳ್ಳಾಪುರ–ಗೌರಿಬಿದನೂರು, ಮೈಸೂರು–ಕುಶಾಲನಗರ, ದಾವಣಗೆರೆ–ತುಮಕೂರು, ರಾಯದುರ್ಗ–ತುಮಕೂರು ಮಾರ್ಗದಲ್ಲಿ ರೈಲ್ವೆ ಯೋಜನೆಗಳನ್ನು ಘೋಷಿಸಲಾಗಿತ್ತು. ಈ ಯೋಜನೆಗಳನ್ನು ಶೀಘ್ರದಲ್ಲಿ ಅನುಷ್ಠಾನಗೊಳಿಸಬೇಕು ಎಂದು ಮುನಿಯಪ್ಪ ಒತ್ತಾಯಿಸಿದರು.

ದಕ್ಷಿಣ ಭಾರತದಲ್ಲಿ ಎರಡನೇ ಅತಿ ದೊಡ್ಡ ರೈಲ್ವೆ ಕೋಚ್ ಫ್ಯಾಕ್ಟರಿಯನ್ನು ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ನಿರ್ಮಾಣ ಮಾಡಲಾಗುತ್ತದೆ ಎಂದು ಘೋಷಣೆ ಮಾಡಲಾಗಿತ್ತು. ಈ ಯೋಜನೆಗೆ 1,200 ಎಕರೆ ಜಾಗ ಮೀಸಲಿಡಲಾಗಿದೆ. ಇದನ್ನು ಶೀಘ್ರದಲ್ಲಿ ಪೂರ್ಣಗೊಳಿಸಬೇಕು ಎಂದು ಅವರು ಕೋರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.