ಬೆಂಗಳೂರು: ಸರ್ಕಾರಿ ಭೂಮಿ ಒತ್ತುವರಿ ಮಾಡಿ ಮನೆಯಲ್ಲ, ಅರಮನೆಯನ್ನೇ ನಿರ್ಮಿಸಿಕೊಂಡಿರುವ ಸಚಿವ ಆನಂದ್ ಸಿಂಗ್ ವಿರುದ್ಧ ಕಾನೂನು ಕೆಲಸ ಮಾಡುತ್ತಿಲ್ಲ ಏಕೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಆನಂದ್ ಸಿಂಗ್ ಅವರ ಮನೆಯ ಚಿತ್ರವನ್ನು ಟ್ವೀಟ್ ಮಾಡಿರುವ ಕಾಂಗ್ರೆಸ್, ಇದು ಮನೆಯಲ್ಲ, ಅರಮನೆಯಂತಿದೆ ಎಂದು ಹೇಳಿದೆ.

ಸರ್ಕಾರಿ ಜಮೀನು ಒತ್ತುವರಿ ಕುರಿತಾಗಿ ಕೂಡಲೇ ತನಿಖೆ ನಡೆಸಿ ಆನಂದ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕಾಂಗ್ರೆಸ್ ಒತ್ತಾಯಿಸಿದೆ.

'ಕೂಡಲೇ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸಿ. ಈ ಕುರಿತು ಧ್ವನಿ ಎತ್ತಿದ ವ್ಯಕ್ತಿಗೆ ರಕ್ಷಣೆ ನೀಡಿ. ಅಕ್ರಮ ನಡೆಸಿದ ಸಚಿವರನ್ನು ವಜಾಗೊಳಿಸಿ. ನಿಮ್ಮ 'ಪಾರದರ್ಶಕ' ಆಡಳಿತವನ್ನು ತೋರಿಸಿ' ಎಂದು ಸಿಎಂ ಬೊಮ್ಮಾಯಿ ಅವರಿಗೆ ಸವಾಲು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.