ನವದೆಹಲಿ: ಜಾತಿ ಗಣತಿ, ಪಂಚ ರಾಜ್ಯಗಳ ಚುನಾವಣೆ ಮತ್ತು ತನಿಖಾ ಸಂಸ್ಥೆಗಳಿಂದ ವಿರೋಧ ಪಕ್ಷದ ರಾಜಕಾರಣಿಗಳನ್ನು ಗುರಿಯಾಗಿಸುವುದು ಸೇರಿದಂತೆ ದೇಶದಲ್ಲಿನ ರಾಜಕೀಯ ಪರಿಸ್ಥಿತಿ ಕುರಿತು ಚರ್ಚಿಸಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು (ಸಿಡಬ್ಲ್ಯುಸಿ) ಮುಂದಿನ ಸೋಮವಾರ ಇಲ್ಲಿ ಸಭೆ ಸೇರಲಿದೆ.

ಅಕ್ಟೋಬರ್ 9ರಂದು ಬೆಳಿಗ್ಗೆ 10.30ಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಭಾಗವಹಿಸಲಿದ್ದಾರೆ.

ಮಧ್ಯ ಪ್ರದೇಶ, ತೆಲಂಗಾಣ, ರಾಜಸ್ಥಾನ, ಛತ್ತೀಸಗಢ ಹಾಗೂ ಮಿಜೋರಾಂ ವಿಧಾನಸಭೆಗಳಿಗೆ ಮುಂದಿನ ವಾರ ಚುನಾವಣೆ ಘೋಷಣೆಯಾಗುವ ನಿರೀಕ್ಷೆ ಇದೆ. ಕಾಂಗ್ರೆಸ್ನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚುನಾವಣಾ ಸಿದ್ಧತೆ ಕುರಿತು ಚರ್ಚೆ ನಡೆಯಲಿದ್ದು, ಕಾರ್ಯತಂತ್ರ ರೂಪಿಸಲಾಗುತ್ತದೆ. ಪ್ರಚಾರದ ವೇಳೆ ಸ್ಥಳೀಯ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಲು ಪಕ್ಷದ ನಾಯಕರಿಗೆ ಸೂಚಿಸುವ ಸಾಧ್ಯತೆ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.