ಬೆಂಗಳೂರು: ‘ಬಿಜೆಪಿ ಅವಧಿಯಲ್ಲಿ ಭಾರೀ ಭ್ರಷ್ಟಾಚಾರ ಪ್ರಕರಣಗಳು ನಡೆದರೂ ಇನ್ನೂ ಯಾಕೆ ಕ್ರಮ ತೆಗೆದುಕೊಂಡಿಲ್ಲ. ಬಿಟ್ ಕಾಯಿನ್, ಕೋವಿಡ್, ಪಿಎಸ್ಐ ಅಕ್ರಮ ನೇಮಕಾತಿ ಸೇರಿದಂತೆ ಹಲವು ಪ್ರಕರಣಗಳ ತನಿಖೆ ಎಲ್ಲಿಗೆ ಬಂದುವು’ ಎಂದು ಸಚಿವರನ್ನು ಕಾಂಗ್ರೆಸ್ ವರಿಷ್ಠರು ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿ ನಿವಾಸದಲ್ಲಿ ಸಚಿವರ ಜೊತೆ ಭಾನುವಾರ ಸಭೆ ನಡೆಸಿದ ಎಐಸಿಸಿ ನಾಯಕರಾದ ಕೆ.ಸಿ. ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲ, ‘ಬಸವರಾಜ ಬೊಮ್ಮಾಯಿ, ಡಾ.ಕೆ. ಸುಧಾಕರ್, ಅಶ್ವತ್ಥನಾರಾಯಣ ವಿರುದ್ಧ ಗಂಭೀರ ಆರೋಪಗಳಿವೆ. ವಿಜಯೇಂದ್ರ, ಅಶೋಕ ವಿರುದ್ಧವೂ ಭ್ರಷ್ಟಾಚಾರದ ಆರೋಪಗಳಿವೆ. ಆರೋಪಗಳನ್ನು ಸಾಬೀತುಪಡಿಸುವಂತಹ ದಾಖಲೆಗಳಿದ್ದರೂ ಯಾರ ಮೇಲೂ ಕ್ರಮ ಆಗಿಲ್ಲ. ಬಿಜೆಪಿ ಅವಧಿಯ ಅಕ್ರಮಗಳ ಬಗ್ಗೆ ಯಾಕೆ ಗಟ್ಟಿ ಧ್ವನಿಯಲ್ಲಿ ಮಾತನಾಡುತ್ತಿಲ್ಲ’ ಎಂದು ಖಾರವಾಗಿ ಕೇಳಿದ್ದಾರೆ ಎಂದು ಗೊತ್ತಾಗಿದೆ.

‘ಮೊದಲು ಈ ಎಲ್ಲ ಹಗರಣಗಳ ತನಿಖೆಯ ವರದಿ ತರಿಸಿಕೊಳ್ಳಿ. ಆ ವರದಿಗಳ ಮೇಲೆ ಕ್ರಮ ಆಗಲೇಬೇಕು. ನೀವು ಕ್ರಮ ತೆಗೆದುಕೊಳ್ಳುತ್ತಿದ್ದರೆ ಬಿಜೆಪಿಯವರು ಪಾದಯಾತ್ರೆ ಹಮ್ಮಿಕೊಳ್ಳುತ್ತಿರಲಿಲ್ಲ. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಮಾತ್ರ ಮಾತನಾಡುವುದಲ್ಲ. ಬಿಜೆಪಿ, ಜೆಡಿಎಸ್ ಕಾಲದ ಹಗರಣಗಳ ಬಗ್ಗೆ ಎಲ್ಲ ಸಚಿವರು ಮಾತನಾಡಬೇಕು’ ಎಂದು ತಾಕೀತು ಮಾಡಿದ್ದಾರೆ ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.