ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆಗೆ ಖುದ್ದಾಗಿ ಹಾಜರಾಗಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಗಳೂರಿಗೆ ಬಂದಿದ್ದಾರೆ.

ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿ ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಡಿ ರಾಹುಲ್ ವಿರುದ್ಧ ಬಿಜೆಪಿ ಮಾನನಷ್ಟ ಮೊಕದ್ದಮೆ ದಾಖಲಿಸಿದೆ.

ನ್ಯಾ. ಕೆ.ಎನ್. ಶಿವಕುಮಾರ್ ಅವರು ಜೂನ್ 7ರಂದು ತಪ್ಪದೆ ವಿಚಾರಣೆಗೆ ಹಾಜರಾಗಬೇಕು ಎಂದು ರಾಹುಲ್ ಅವರಿಗೆ ನಿರ್ದೇಶನ ನೀಡಿತ್ತು.

ಇದೇ ಪ್ರಕರಣದಲ್ಲಿ ಆರೋಪಿಗಳಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೂ ಜೂನ್ 1ರಂದು ನ್ಯಾಯಾಲಯದ ವಿಚಾರಣೆಗೆ ಹಾಜರಾಗಿದ್ದರು. ಬಳಿಕ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ.

ಪ್ರಕರಣವೇನು?

'2023ರಲ್ಲಿ ನಡೆದ ರಾಜ್ಯ ವಿಧಾನಸಭೆ ಚುನಾವಣೆಯ ವೇಳೆ, ಕಾಂಗ್ರೆಸ್ ಪಕ್ಷವು ರಾಷ್ಟ್ರೀಯ ಮತ್ತು ರಾಜ್ಯದ ಪ್ರಮುಖ ದಿನಪತ್ರಿಕೆಗಳಲ್ಲಿ 2023ರ ಮೇ 5ರಂದು ಜಾಹೀರಾತು ನೀಡಿ, ಆಡಳಿತಾರೂಢ ರಾಜ್ಯ ಬಿಜೆಪಿ ಸರ್ಕಾರ ಶೇ 40ರಷ್ಟು ಕಮಿಷನ್ ಸರ್ಕಾರ. ಇದು ಕಳೆದ ನಾಲ್ಕು ವರ್ಷಗಳಲ್ಲಿ ₹ 1.50 ಲಕ್ಷ ಕೋಟಿ ಲೂಟಿ ಹೊಡೆದಿರುವ ಭ್ರಷ್ಟ ಸರ್ಕಾರ' ಎಂದು ಆರೋಪಿಸಿದ್ದರು.

'ಈ ಆರೋಪಕ್ಕೆ ಫಿರ್ಯಾದುದಾರರೇ ಇಲ್ಲ. ಇದು ರಾಷ್ಟ್ರೀಯ ಪಕ್ಷವೊಂದರ ವಿರುದ್ಧ ಮಾಡಲಾಗಿರುವ ಆಧಾರ ರಹಿತ, ಪೂರ್ವಗ್ರಹ ಪೀಡಿತ ಮತ್ತು ಮಾನಹಾನಿಕರ ಆರೋಪ' ಎಂದು ಬಿಜೆಪಿಯ ರಾಜ್ಯ ಘಟಕದ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಎಸ್.ಕೇಶವಪ್ರಸಾದ್ ಖಾಸಗಿ ದೂರು ಸಲ್ಲಿಸಿದ್ದರು.

ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷ ಮೊದಲ ಆರೋಪಿ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಹಾಗೂ ರಾಹುಲ್ ಗಾಂಧಿ ಕ್ರಮವಾಗಿ 2, 3 ಮತ್ತು 4ನೇ ಆರೋಪಿಗಳಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.