ಬೆಂಗಳೂರು: ಮೇಲುಕೋಟೆ ಜೆಡಿಎಸ್ ಶಾಸಕ ಸಿ.ಎಸ್. ಪುಟ್ಟರಾಜು ಅವರು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನುಗುರುವಾರ ರಾತ್ರಿ ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಸಂಜೆ 7.30ರ ಸುಮಾರಿಗೆ ಸಿದ್ದರಾಮಯ್ಯ ಅವರ ನಿವಾಸಕ್ಕೆ ಪುಟ್ಟರಾಜು ಬಂದಿದ್ದರು. ಇಬ್ಬರೂ ಸುಮಾರು 1 ಗಂಟೆ ರಾಜ್ಯ ರಾಜಕೀಯ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದರು. ಮೇಲುಕೋಟೆಯ ವಲ್ಲಿ ಡೆಂಕಾಪುರ ಗ್ರಾಮದಲ್ಲಿರುವ ಶ್ರೀ ಬೀರೇಶ್ವರ ದೇವಸ್ಥಾನದ ಉದ್ಘಾಟನೆ ಫೆ. 14ರಂದು ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಆಹ್ವಾನಿಸಲು ಪುಟ್ಟರಾಜು ಬಂದಿದ್ದರು ಎಂದೂ ಮೂಲಗಳು
ಹೇಳಿವೆ.

‘ಈ ಹಿಂದೆಯೂ ಎರಡು ಬಾರಿ ಪುಟ್ಟರಾಜು ಮತ್ತು ಸಿದ್ದರಾಮಯ್ಯ ನಡುವೆ ಮಾತುಕತೆ ನಡೆದಿದ್ದು, ಕಾಂಗ್ರೆಸ್ ಸೇರುವ ಬಗ್ಗೆ ಪುಟ್ಟರಾಜು ಒಲವು ವ್ಯಕ್ತಪಡಿಸಿದ್ದಾರೆ’ ಎಂದು ಸಿದ್ದರಾಮಯ್ಯ ಅವರ ಆಪ್ತ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.