ಬೆಂಗಳೂರು: ಆರೋಪದ ತನಿಖೆ ನಡೆಸಿ ನಿಮ್ಮ ಮೇಲಿನ ಆರೋಪವನ್ನು ಸುಳ್ಳೆಂದು ಸಾಬೀತುಪಡಿಸಿ ಎಂದು ಹೇಳಬೇಕಾಗಿದ್ದ ಪ್ರಧಾನಿ ನರೇಂದ್ರ ಮೋದಿಯವರು ಆರೋಪವನ್ನೇ ನಿರ್ಲಕ್ಷಿಸಿ ಎಂದು ಹೇಳಿದರೆ ಹೇಗೆ? ಅಪರಾಧ ಪ್ರಕರಣಗಳ ತನಿಖೆಗೆ ಪೊಲೀಸ್ ಇಲಾಖೆ, ನ್ಯಾಯಾಲಯಗಳ ಅಗತ್ಯ ಇಲ್ಲವೇ? ಪ್ರಧಾನಮಂತ್ರಿಯವರ ಏಕಪಕ್ಷೀಯ ತೀರ್ಮಾನವೇ ಅಂತಿಮವೇ? ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಪ್ರಜಾವಾಣಿ ವರದಿಯನ್ನು ಉಲ್ಲೇಖಿಸಿ ಸರಣಿ ಟ್ವೀಟ್ ಮಾಡಿರುವ ಅವರು, ಬಿಟ್ ಕಾಯಿನ್ ಹಗರಣದ ಬಗ್ಗೆ ಕೇಂದ್ರ/ರಾಜ್ಯ ಸರ್ಕಾರಗಳ ತನಿಖಾ ಸಂಸ್ಥೆಗಳಿಂದಲೇ ತನಿಖೆ ನಡೆಯುತ್ತಿದೆ. ಬಸವರಾಜ ಬೊಮ್ಮಾಯಿ ಈಗಿನ ಮುಖ್ಯಮಂತ್ರಿಗಳು ಮಾತ್ರ ಅಲ್ಲ, ಹಿಂದೆ ಗೃಹಮಂತ್ರಿ ಆಗಿದ್ದರು. ಈ ಹಂತದಲ್ಲಿ ಪ್ರಧಾನಿ ಮೋದಿ ಆರೋಪವನ್ನು ನಿರ್ಲಕ್ಷಿಸಿ ಎಂದರೆ ತನಿಖೆಯನ್ನು ಕೈಬಿಡಿ ಎಂದಾಗುವುದಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, ಬಿಟ್ ಕಾಯಿನ್ ಹಗರಣದಲ್ಲಿ ಬಸವರಾಜ ಬೊಮ್ಮಾಯಿ ಅವರು ಭಾಗಿಯೋ, ಇಲ್ಲವೋ ನಮಗೆ ಗೊತ್ತಿಲ್ಲ, ಅವರು ಅಪರಾಧಿಗಳೆಂದು ಯಾರೂ ಹೇಳಿಲ್ಲ. ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷಿಸಿ ಎಂದಷ್ಟೇ ನಾನು ಮತ್ತು ನಮ್ಮ ಪಕ್ಷದ ನಾಯಕರು ಹೇಳುತ್ತಿರುವುದು. ತನಿಖೆ ನಡೆಸಲು ಹಿಂಜರಿಕೆ ಯಾಕೆ? ಎಂದು ಹೇಳಿದ್ದಾರೆ.

'ಕಾಂಗ್ರೆಸ್ ನಾಯಕರ ಹೆಸರು ಇದೆ ಎಂದು ಹೇಳಿ ನಮ್ಮ ಬಾಯಿಮುಚ್ಚಿಸಲು ಪ್ರಯತ್ನ ಮಾಡಬೇಡಿ. ಕೇಂದ್ರ ಮತ್ತು ರಾಜ್ಯದಲ್ಲಿ ನಿಮ್ಮದೇ ಸರ್ಕಾರ ಇದೆ. ತನಿಖೆ ನಡೆಸಿ ಅಪರಾಧಿಗಳನ್ನು ಬಯಲಿಗೆಳೆಯಿರಿ, ಅವರೆಲ್ಲ ಯಾವ ಪಕ್ಷದವರು ಎನ್ನುವುದನ್ನು ಆ ಮೇಲೆ ನೋಡಿಕೊಳ್ಳೋಣ' ಎಂದು ಸವಾಲೆಸೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.