ಹುಬ್ಬಳ್ಳಿ: ಸಿದ್ದರಾಮಯ್ಯ ಅವರನ್ನು ಮುಗಿಸಿ ಎಂದರೆ ಏನರ್ಥ? ಜನರನ್ನು ರಕ್ಷಿಸಬೇಕಾದ ಸಚಿವರೇ (ಅಶ್ವತ್ಥ ನಾರಾಯಣ) ಇಂತಹ ಹೇಳಿದ್ದು ಸರೀನಾ? ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಇದು ಸರೀನಾ ಎನ್ನುವುದನ್ನು ಹೇಳಲಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು.

ಹುಬ್ಬಳ್ಳಿಯಲ್ಲಿ ಗುರುವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು.

ಬಿಜೆಪಿಯದ್ದು ಹೊಡಿ, ಬಡಿ, ಕಡಿ ಸಂಸ್ಕೃತಿ. ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರನ್ನು ಕೊಂದವರು ಇವರು. ಆರ್.ಎಸ್.ಎಸ್.ನವರು ಈ ರೀತಿ ಹೇಳಿಕೆ ಕೊಡಿಸಿದ್ದಾರೆ ಎಂದರು.

ಇದನ್ನೂ ಓದಿ: ಟಿಪ್ಪು ವಿಚಾರವಾಗಿ ವಾಕ್ಸಮರ: ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

ರಾಜ್ಯದಲ್ಲಿ ರೈತರು, ಬಡವರು, ದಲಿತರು, ಅಲ್ಪಸಂಖ್ಯಾತರ ಬಗ್ಗೆ ಚರ್ಚೆಯಾಗಬೇಕು. ಅದನ್ನು ಬಿಟ್ಟು ಹೊಡಿ, ಬಡಿ, ಕಡಿ ಎನ್ನುತ್ತಿದ್ದಾರೆ ಎಂದು ಹೇಳಿದರು.

ವಜಾಗೊಳಿಸಿ: ಇಂತಹ ಹೇಳಿಕೆ ನೀಡಿದ ಅಶ್ವತ್ಥ ನಾರಾಯಣ ಅವರನ್ನು ತಕ್ಷಣ ಸಚಿವ ಸಂಪುಟದಿಂದ ರಾಜ್ಯಪಾಲರು ವಜಾಗೊಳಿಸಬೇಕು ಎಂದು ಅವರು ಒತ್ತಾಯಿಸಿದರು.

ಪ್ರಕರಣ ದಾಖಲಿಸಿಕೊಳ್ಳಲಿ: ನಾನು ದೂರು ಕೊಡಲ್ಲ. ಸಚಿವರ ವಿರುದ್ಧ ಪೊಲೀಸರೇ ಸ್ವಯಂ ಪ್ರೇರಿತರಾಗಿ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.