ದಿನಕ್ಕೊಂದು ತಿರುವು ಪಡೆದು ರಾಜಕೀಯ ಕೆಸರೆರೆಚಾಟಕ್ಕೆ ಕಾರಣವಾಗಿರುವ ಸಿಡಿ ಹಗರಣದ ತನಿಖೆ ತಾರ್ಕಿಕ ಅಂತ್ಯ ಕಾಣಬೇಕಾದರೆ ಸಂತ್ರಸ್ತ ಯುವತಿ ಅಜ್ಞಾತ ಸ್ಥಳದಿಂದ ಹೊರಬಂದು ಪೊಲೀಸರ ಮುಂದೆ ಹಾಜರಾಗಿ ಹೇಳಿಕೆ ನೀಡಬೇಕು. ಕಾನೂನುಬದ್ಧವಾದ ಅವಳ ಹಕ್ಕನ್ನು ಚಲಾಯಿಸದಂತೆ ತಡೆಯುತ್ತಿರುವವರು ಯಾರು? 2/5#RameshJarkiholiCDCase
ಸಿಡಿ ಪ್ರಕರಣದಿಂದಾಗಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕದ ಮಾನ ಹರಾಜು ಆಗುತ್ತಿರುವುದಕ್ಕೆ ರಾಜ್ಯ ಸರ್ಕಾರ ಮತ್ತು ಪೊಲೀಸರ ವೈಫಲ್ಯವೇ ಕಾರಣ. ಸಿಡಿ ಮಾಧ್ಯಮದಲ್ಲಿ ಕಾಣಿಸಿಕೊಂಡು 26 ದಿನಗಳು ಕಳೆದರೂ ಸಂತ್ರಸ್ತೆ ಯುವತಿಯನ್ನು ಪೊಲೀಸರಿಗೆ ಪತ್ತೆಹಚ್ಚಲಿಕ್ಕಾಗದಿರುವುದು ನಾಚಿಕೆಗೇಡಿನ ಸಂಗತಿ. 1/5#RameshJarkiholiCDCase
ಸಿಡಿಯಲ್ಲಿರುವ ಯುವತಿ ಅಜ್ಞಾತ ಸ್ಥಳದಿಂದ ನಿರಂತರವಾಗಿ ತನ್ನ ಹೇಳಿಕೆಗಳ ಸಿಡಿಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡುತ್ತಿದ್ದಾಳೆ, ತನ್ನ ವಕೀಲನ ಮೂಲಕ ಪೊಲೀಸರಿಗೆ ದೂರು ಕಳುಹಿಸಿಕೊಡುತ್ತಿದ್ದಾಳೆ, ತಂದೆ-ತಾಯಿ ಜೊತೆ ಮಾತನಾಡುತ್ತಿದ್ದಾಳೆ. ಹೀಗಿದ್ದರೂ ಪೊಲೀಸರ ಕೈಗೆ ಮಾತ್ರ ಸಿಗುತ್ತಿಲ್ಲ ಎಂದರೆ ಏನು ಅರ್ಥ? 3/5#RameshJarkiholiCDCase
ಮಾಧ್ಯಮಗಳಲ್ಲಿ ಪ್ರಕಟ/ಪ್ರಸಾರವಾಗಿರುವ ಯುವತಿಯದ್ದೆನ್ನಲಾದ ಹೇಳಿಕೆಗಳನ್ನು ಗಮನಿಸಿದರೆ ಆಕೆಗೆ ರಾಜ್ಯ ಸರ್ಕಾರದ ಮೇಲಾಗಲಿ, ಪೊಲೀಸರ ಮೇಲಾಗಲಿ ನಂಬಿಕೆ ಇಲ್ಲ. ಪೊಲೀಸರು ತನ್ನ ವಿರುದ್ಧವೇ ಸಂಚು ಮಾಡುತ್ತಿದ್ದಾರೆಂಬ ಅರ್ಥದಲ್ಲಿ ಯುವತಿ ಮಾತನಾಡುತ್ತಿದ್ದಾಳೆ. ಗೃಹಸಚಿವ @BSBommai ಈ ಬಗ್ಗೆ ಗಮನಹರಿಸಬೇಕು. 4/5#RameshJarkiholiCDCase
ರಾಜ್ಯದ ಪೊಲೀಸ್ ಇಲಾಖೆಯೂ ಸೇರಿದಂತೆ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿರುವುದಕ್ಕೆ ಈ ಸಿಡಿ ಹಗರಣ ಸಾಕ್ಷಿ. ಸಾಮಾನ್ಯ ಕುಟುಂಬದಿಂದ ಬಂದಿರುವ ಯುವತಿಯನ್ನು ಇಷ್ಟು ದಿನಗಳ ನಂತರವೂ ಪತ್ತೆ ಹಚ್ಚಲಾಗಿಲ್ಲವೆಂದರೆ ಏನು ಅರ್ಥ? ಆಕೆಯೇನು ವಿಜಯಮಲ್ಯನೋ ಇಲ್ಲವೇ ನೀರವ್ ಮೋದಿಯೋ? 5/5#RameshJarkiholiCDCase